Tuesday, April 8, 2025

ವಿನಯ್​ ಸಾವಿಗೆ ನ್ಯಾಯಕೊಡಿಸುವಂತೆ ಗೃಹ ಸಚಿವರಿಗೆ ಮನವಿ ಮಾಡುತ್ತೇನೆ; ವಿಜಯೇಂದ್ರ

ಶಿವಮೊಗ್ಗ: ಬಿಜೆಪಿ ಕಾರ್ಯಕರ್ತ ವಿನಯ್​ ಸೋಮಯ್ಯ ಆತ್ಮಹತ್ಯೆ ಕುರಿತು ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದ್ದು. ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಬಂದಾಗಿನಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿದೆ. ರಾಜ್ಯ ಸರ್ಕಾರ ಈ ಕುರಿತು ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ವಿಜಯೇಂದ್ರ ‘ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಯ ಹಿಂದೆ ಯಾರಿದ್ದರೂ ಸಹ ರಾಜ್ಯ ಸರ್ಕಾರ ಅವರ ವಿರುದ್ದ ಕಾನೂನಿನ ಕ್ರಮ ಜರುಗಿಸಬೇಕು. ಮಡಿಕೇರಿ ಮೂಲದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಡೆತ್ ನೋಟ್ ಬರೆದಿಟ್ಟು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಶಾಸಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆನೆಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.

ಇದನ್ನೂ ಓದಿ :ಮೊದಲ ಬಾರಿಗೆ ಮೋದಿ-ಮೊಹಮ್ಮದ್ ಯೂನಸ್ ಭೇಟಿ; ದ್ವೀಪಕ್ಷೀಯ ಮಾತುಕತೆ

ಈ ರೀತಿ ಆತ್ಮಹತ್ಯೆಗೆ ಶರಣಾಗಿರುವುದು ಬಹಳ ದುರ್ದೈವ ಮತ್ತು ನೋವಿನ ಸಂಗತಿಯಾಗಿದೆ. ನಾನು ರಾಜ್ಯ ಸರ್ಕಾರ ಹಾಗೂ ಗೃಹ ಸಚಿವರಿಗೆ ಆಗ್ರಹ ಮಾಡುತ್ತಿದ್ದೆನೆ. ಅದು ಏಕೋ ಗೊತ್ತಿಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಗಿನಿಂದ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಸಾಕಷ್ಟು ಕಾರ್ಯಕರ್ತರ ಮೇಲೆ ವಿನಾಕಾರಣ ಎಫ್​ಐಆರ್ ಮಾಡಲಾಗುತ್ತಿದೆ. ನಮಗೆ ಕಿರುಕುಳ ತೊಂದ್ರೆ ನೀಡಲಾಗುತ್ತಿದೆ ಎಂದು ದೂರಿದ್ದಾರೆ.

ನಮ್ಮ ವಿನಯ್ ಸೋಮಯ್ಯ ಇದೇ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು. ನಾನು ಗೃಹ ಸಚಿವರಿಗೆ ಅಗ್ರಹ ಮಾಡುತ್ತೇನೆ. ಬಿಜೆಪಿ ಕಾರ್ಯಕರ್ತ ಅನ್ನುವುದಕ್ಕಿಂತಲೂ ಮಾನವಿಯತೆಯ ದೃಷ್ಡಿಯಿಂದ ನೋಡಬೇಕಾಗುತ್ತದೆ. ಕಾಂಗ್ರೆಸ್​ ಆಡಳಿತ ಅವಧಿಯಲ್ಲಿ ಬಿಜೆಪಿ ಕಾರ್ಯಕರ್ತರಲ್ಲದೆ, ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ.

ನಾನು ಗೃಹ ಸಚಿವರಲ್ಲಿ ವಿನಂತಿಸಿಕೊಳ್ಳುತ್ತೇನೆ. ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಈ ಘಟನೆ ಹಿಂದೆ ಶಾಸಕರು ಇದ್ದರೂ, ಇನ್ನೂಬ್ಬರು ಇದ್ದರೂ ಅವರ ಮೇಲೆ ಕಠಿಣವಾದ ಕ್ರಮವನ್ನು ತೆಗೆದುಕೊಳ್ಳಬೇಕು.
ಅವರು ಎಷ್ಟೇ ದೊಡ್ಡ ವ್ಯಕ್ತಿಗಳಾಗಿದ್ದರು ಸಹ ವಿನಯ್ ಸೋಮಯ್ಯ ಸಾವಿಗೆ ನ್ಯಾಯ ಕೊಡಬೇಕು. ಇಲ್ಲವಾದಲ್ಲಿ ಇದರ ವಿರುದ್ದ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ. ಇದರಿಂದ ತಕ್ಷಣ ಎಚ್ಚೆತ್ತು, ಗೃಹ ಸಚಿವರು ಹಾಗೂ ರಾಜ್ಯ ಸರ್ಕಾರ ತುರ್ತು ಹಾಗೂ ಕಠಿಣ ಕ್ರಮ ತೆಗೆದುಕೊಳ್ಳಬೇಕು

RELATED ARTICLES

Related Articles

TRENDING ARTICLES