ಬೆಂಗಳೂರು : ವಿಧಾನಸೌಧವನ್ನ ಪ್ರವಾಸಿ ತಾಣವಾಗಿ ಮಾಡಲು ಸರ್ಕಾರ ನಿರ್ಧಾರಿಸಿದ್ದು. ಪ್ರವಾಸೋಧ್ಯಮ ಇಲಾಖೆಯ ಮನವಿ ಮೇರೆಗೆ ಸರ್ಕಾರ ಷರತ್ತು ಬದ್ದ ಅನುಮತಿ ನೀಡಿದೆ. ನಿರ್ಧಿಷ್ಟ ಪ್ರವೇಶ ಶುಲ್ಕ ನೀಡಿ ಪ್ರವಾಸಿಗರು ವಿಧಾನ ಸೌದ ನೋಡಲು ಅನುಮತಿ ನೀಡಲಾಗಿದ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :ರಮ್ಮಿ ಆಟದ ಜೋಕರ್ ರೀತಿ ಹೆಚ್ಡಿಕೆ ಯಾರ ಜೊತೆ ಬೇಕಾದರು ಹೋಗ್ತಾರೆ; ಚೆಲುವರಾಯಸ್ವಾಮಿ
ವಿಧಾನಸೌಧ ನೋಡಲು ಷರತ್ತು ಮತ್ತು ನಿಬಂಧನೆಗಳು
1. ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಬೆಳಿಗ್ಗೆ 8.00 ರಿಂದ ಸಂಜೆ 6.00ರವರೆಗೆ “Guided Tour”
ವ್ಯವಸ್ಥೆ ಕಲ್ಪಿಸಲಾಗುವುದು.
2. ವಿಧಾನಸೌಧ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರನ್ನು ತಲಾ 30 ಜನರ ತಂಡಗಳನ್ನಾಗಿ ವಿಭಜಿಸಿ, ವೀಕ್ಷಣೆಗೆ ಅವಕಾಶ ಕಲ್ಪಿಸುವುದು ಹಾಗೂ ಈ ಪ್ರತಿ ತಂಡಗಳ ಮೇಲ್ವಿಚಾರಣೆ ಮಾಡಲು ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ಅಧಿಕಾರಿಗಳನ್ನು ಕಡ್ಡಾಯವಾಗಿ ನೇಮಿಸತಕ್ಕದ್ದು ಹಾಗೂ ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಇವರನ್ನು ಉಸ್ತುವಾರಿ ಅಧಿಕಾರಿಯನ್ನಾಗಿ ನೇಮಿಸುವುದು. ಪ್ರತಿ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹಾಗೂ ವಿವರಗಳನ್ನು ಸಿಆಸುಇ(ಕಾರ್ಯಕಾರಿ) ಹಾಗೂ ವಿಧಾನಸೌಧದ ಭದ್ರತಾ ವಿಭಾಗಕ್ಕೆ ಆಯಾದಿನವೇ ಸಲ್ಲಿಸತಕ್ಕದ್ದು. Guided Tour ಗೆ ಅನುವಾಗುವಂತೆ ಪ್ರವಾಸಿಗರು Online ಮುಖಾಂತರ ticket ಪಡೆಯಲು ಪ್ರವಾಸೋದ್ಯಮ ಇಲಾಖೆಯಿಂದ ಒಂದು ತಂತ್ರಾಂಶ ಅಭಿವೃದ್ಧಿ ಪಡಿಸುವುದು.
3. ಪ್ರವಾಸಿಗರಿಗೆ ನಿಗದಿಪಡಿಸುವ ಪ್ರವೇಶ ದರವು ಜನಸ್ನೇಹಿಯಾಗಿರತಕ್ಕದ್ದು ಹಾಗೂ ವಸೂಲಿ ಮಾಡುವ ಪ್ರವೇಶ ಶುಲ್ಕದಲ್ಲಿ ನಿರ್ದಿಷ್ಟ ಶುಲ್ಕವನ್ನು ಸರ್ಕಾರದ ಲೆಕ್ಕಶೀರ್ಷಿಕೆ: 0070-60-800-0-04-000ಗೆ ಪ್ರವಾಸೋದ್ಯಮ ಇಲಾಖೆಯು ಜಮಾ ಮಾಡತಕ್ಕದ್ದು.
4. ಉಪ ಪೊಲೀಸ್ ಆಯುಕ್ತರು, ವಿಧಾನಸೌಧ ಭದ್ರತೆ ಇವರು ಭದ್ರತೆಗೆ ಸಂಬಂಧಿಸಿದಂತೆ ನೀಡುವ ಸೂಚನೆಗಳನ್ನು ಪಾಲಿಸಲು ಬದ್ಧರಾಗಿರತಕ್ಕದ್ದು.
5. ಪ್ರವಾಸಿಗರ ಅಧಿಕೃತ ಗುರುತಿನ ಚೀಟಿಯನ್ನು ಪರಿಶೀಲಿಸಿ, ಪ್ರವೇಶಕ್ಕೆ ಅವಕಾಶ ಕಲ್ಪಿಸತಕ್ಕದ್ದು.
6. ವಿಧಾನಸೌಧ ಕಟ್ಟಡ/ ಉದ್ಯಾನವನಗಳು/ಪ್ರತಿಮೆಗಳಿಗೆ ಯಾವುದೇ ದಕ್ಕೆ ಉಂಟಾಗದಂತೆ ಎಚ್ಚರಿಕ ವಹಿಸತಕ್ಕದ್ದು ಹಾಗೂ ಈ ಕುರಿತು ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲು ಲೋಕೋಪಯೋಗಿ ಇಲಾಖೆಯು ಕ್ರಮವಹಿಸತಕ್ಕದ್ದು.
7. ವೀಕ್ಷಣೆಗೆ ಆಗಮಿಸುವ ಪ್ರವಾಸಿಗರ ಪರಿವೀಕ್ಷಣೆಯ ಕುರಿತು ರೂಟ್ ಮ್ಯಾಪ್ (Root Map/Lay out map) ಅನ್ನು ಲೋಕೋಪಯೋಗಿ ಇಲಾಖೆ/ವಿಧಾನಸೌಧ ಭದ್ರತಾ ವಿಭಾಗದೊಂದಿಗೆ ಸಮಾಲೋಚಿಸಿ ತಯಾರಿಸಿ ಕಡ್ಡಾಯವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅನುಮೋದನೆ ಪಡೆಯತಕ್ಕದ್ದು.
8. ಪರಿವೀಕ್ಷಣೆಯ ಸಂದರ್ಭದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಸುಸಜ್ಜಿತ ವೈದ್ಯಕೀಯ ತಂಡದೊಂದಿಗೆ ಅಂಬ್ಯುಲೆನ್ಸ್ ಸೌಲಭ್ಯವನ್ನು ಕಲ್ಪಿಸಲು ಆರೋಗ್ಯ ಇಲಾಖೆಯು ಅಗತ್ಯ ಕ್ರಮವಹಿಸತಕ್ಕದ್ದು.
9. ಅಗ್ನಿ ಅವಘಡ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಗ್ನಿ ಶಾಮಕ ಇಲಾಖೆಯರು ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸಿದ್ಧರಿರತಕ್ಕದ್ದು.