2008ರ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಕೊನೆಗೂ ಭಾರತಕ್ಕೆ ಬಂದಿಳಿದಿದ್ದಾನೆ. ದೆಹಲಿಯ ಪಾಲಂ ಏರ್ಬೇಸ್ಗೆ ಉಗ್ರಜಂತು ತಹವೂರ್ ರಾಣನನ್ನು ಹೊತ್ತುತಂದ ವಿಶೇಷ ವಿಮಾನ ಆಗಮಿಸಿದ್ದು. ಎನ್‌ಐಎ ಅಧಿಕಾರಿಗಳು ಈತನನ್ನು ಅರೆಸ್ಟ್ ಮಾಡಿದ್ದಾರೆ.
ಎನ್‌ಐಎ ಮತ್ತು ರಾ ಅಧಿಕಾರಿ ತಂಡಗಳ ಬಿಗಿ ಭದ್ರತೆಯೊಂದಿಗೆ ವಿಶೇಷ ವಿಮಾನದಲ್ಲಿ ದೆಹಲಿಯ ಪಾಲಂ ಏರ್ಬೇಸ್ನ ಟರ್ಮಿನಲ್ 1ನಲ್ಲಿ ಬಂದಿಳಿದಿದ್ದಾನೆ. ಇಲ್ಲಿಂದ ಅವನನ್ನ ಎನ್‌ಐಎ ಕೇಂದ್ರ ಕಚೇರಿಗೆ ಕರೆದೊಯ್ಯಲು ವಿಶೇಷ ಬುಲೆಟ್ ಪ್ರೂಫ್ ವಾಹನ ಸಿದ್ಧವಾಗಿದೆ. ಈತನನ್ನು ಮೊದಲಿಗೆ ನ್ಯಾಯಾಲಯಕ್ಕೆ ಹಾಜರು ಪಡಿಸಿ ನಂತರ ಆತನನ್ನು ಕಸ್ಟಡಿಗೆ ಪಡೆಯಲಾಗುತ್ತದೆ. ಈತನಿಗಾಗಿ ತಿಹಾರ್ ಜೈಲಿನಲ್ಲಿ ವಿಶೇಷ ಭದ್ರತೆಗಳೊಂದಿಗೆ ಕಸ್ಟಡಿಯನ್ನು ಸಿದ್ದಪಡಿಸಿದ್ದು. ಈತನ ವಿಚಾರಣೆ ಅಲ್ಲಿಯೇ ನಡೆಯಲಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :ಒಲಂಪಿಕ್ ಕ್ರೀಡಾಕೂಟಕ್ಕೆ ಮೊದಲ ಬಾರಿಗೆ ಕ್ರಿಕೆಟ್ ಸೇರ್ಪಡೆ; ಕೇವಲ 6 ತಂಡಗಳಿಗಷ್ಟೆ ಅವಕಾಶ
ಯಾರೂ ಈ ತಹವೂರ್ ರಾಣ ?
ತಹವ್ವೂರ್ ರಾಣಾ ಹುಟ್ಟಿದ್ದು ಪಾಕಿಸ್ತಾನದಲ್ಲಿ. ಆರ್ಮಿ ಮೆಡಿಕಲ್ ಕಾಲೇಜಿನಲ್ಲ ಅಧ್ಯಯನ ಮಾಡಿದ ರಾಣಾ, ಪಾಕಿಸ್ತಾನದ ಸೇನೆಯಲ್ಲಿ 10 ವರ್ಷಗಳ ಕಾಲ ವೈದ್ಯನಾಗಿ ಕೆಲಸ ಮಾಡಿದ್ದ. ಈ ಕೆಲಸ ಇಷ್ಟವಾಗದೇ ಸೇನೆ ತೊರೆದ ರಾಣಾ, ಭಾರತದ ವಿರುದ್ಧ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದ. ಸದ್ಯ ರಾಣಾ ಕೆನಡಾ ಮೂಲದ ಉದ್ಯಮಿ.
ರಾಣಾ ನವೆಂಬರ್ 11 ಮತ್ತು 21, 2008 ರ ನಡುವೆ ದುಬೈ ಮೂಲಕ ಮುಂಬೈಗೆ ಬಂದಿದ್ದ. ಪೊವೈನಲ್ಲಿರುವ ಹೋಟೆಲ್ ರಿನೈಸಾನ್ಸ್‌ನಲ್ಲಿ ತಂಗಿ ದಾಳಿಗೆ ಬೇಕಾದ ಸಿದ್ಧತೆ ಪರಿಶೀಲಿಸಿದ್ದ. ಈತ ದುಬೈಗೆ ಹೋದ 5 ದಿನಗಳ ಬಳಿಕ ದಾಳಿ ನಡೆದಿತ್ತು. ಭಾರತವು ಜೂನ್ 2020 ರಲ್ಲಿ ರಾಣಾನನ್ನು ಗಡಿಪಾರಿಗಾಗಿ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಈ ವರ್ಷದ ಫೆಬ್ರವರಿಯಲ್ಲಿ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಣಾನನ್ನು ಗಡಿಪಾರು ಮಾಡಲಾಗುವುದು ಎಂದು ದೃಢಪಡಿಸಿದ್ದರು.