Wednesday, May 7, 2025

ಋತುಮತಿಯಾಗಿದ್ದ ವಿದ್ಯಾರ್ಥಿನಿಯನ್ನು ತರಗತಿ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಶಿಕ್ಷಕರು

ಕೊಯಮತ್ತೂರು: ಋತುಮತಿಯಾಗಿದ್ದ ಬಾಲಕಿಯೊಬ್ಬಳನ್ನು ಶಾಲೆಯ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಅಮಾನವೀಯ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಕೊಯಮತ್ತೂರಿನ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು. ತರಗತಿಯ ಹೊರಗೆ ಪರೀಕ್ಷೆ ಬರೆಯುತ್ತಿರುವ ಬಾಲಕಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಕೊಯಮತ್ತೂರಿನ ಖಾಸಗಿ ಶಾಲೆಯಲ್ಲಿ ನಿನ್ನೆ(ಏ.09) ಬುಧವಾರ ಎಂಟನೇ ತರಗತಿಯ ವಾರ್ಷಿಕ ಪರೀಕ್ಷೆ ನಡೆದಿದ್ದು. ಪರಿಶಿಷ್ಟ ಜಾತಿಯ ವಿದ್ಯಾರ್ಥಿನಿ ಋತುಮತಿಯಾಗಿದ್ದಾಳೆ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯನ್ನು ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ್ದು. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಶಾಲಾ ಆಡಳಿತದ ವಿರುದ್ದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ :ತಹವೂರ್​ ರಾಣನ ಪೌರತ್ವ ರದ್ದುಗೊಳಿಸಿದ್ದೇವೆ, ಆತ ನಮ್ಮ ಪ್ರಜೆಯಲ್ಲ: ಪಾಕಿಸ್ತಾನ ವಿದೇಶಾಂಗ ಇಲಾಖೆ

ಘಟನೆ ಕುರಿತು ಫ್ರೌಡಶಾಲೆ ಶಿಕ್ಷಣ ಇಲಾಖೆ ನಿರ್ದೇಶಕ ಎ.ಪಳನಿಸ್ವಾಮಿ ವರದಿ ನೀಡಲು ಸೂಚಿಸಿದ್ದು. ಶಾಲೆಗೆ ಶೋಕಾಸ್​ ನೋಟಿಸ್​ ನೀಡಿ ಉತ್ತರ ಕೇಳಲಾಗಿದೆ. ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೊಯಮತ್ತೂರು ಮುಖ್ಯ ಶಿಕ್ಷಣಾಧಿಕಾರಿ (CEO) ಆರ್. ಬಾಲಮುರಳಿ ಮತ್ತು ಖಾಸಗಿ ಶಾಲೆಗಳ ಜಿಲ್ಲಾ ಶಿಕ್ಷಣಾಧಿಕಾರಿ (DEO) ಪುನಿತಾ ಅಂತೋಣಿಯಮ್ಮಳ್ ಅವರು ಇಂದು ಶಾಲೆಗೆ ಭೇಟಿ ನೀಡಿ ಶಾಲಾ ಆಡಳಿತ ಅಧಿಕಾರಿಗಳೊಂದಿಗೆ ಘಟನೆಯ ಬಗ್ಗೆ ವಿಚಾರಿಸಿದರು.

ಇನ್ನು ಈ ಕುರಿತು ಬಾಲಕಿ ತಂದೆ ಮಾಹಿತಿ ನೀಡಿದ್ದು, ಮಗಳು ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ಬಳಿಯ ಸೆಂಗುಟ್ಟೈಪಾಳ್ಯಂನಲ್ಲಿರುವ ಮೆಟ್ರಿಕ್ಯುಲೇಷನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಮಗಳು ಕಳೆದ ವಾರ ಋತುಮತಿಯಾದ ನಂತರ ಒಂದು ವಾರ ಶಾಲೆಗೆ ಹೋಗಿರಲಿಲ್ಲ. ಈ ವಾರ ಎರಡು ವಾರ್ಷಿಕ ಪರೀಕ್ಷೆ ಇದ್ದ ಕಾರಣ ಹೋಗಲೇ ಬೇಕಾಗಿತ್ತು. ಪರೀಕ್ಷಾ ಹಾಲ್‌ನಲ್ಲಿ ಬರೆಯಲು ಪ್ರತ್ಯೇಕ ಮೇಜು ಮತ್ತು ಬೆಂಚ್ ವ್ಯವಸ್ಥೆ ಮಾಡಿಕೊಡಿ, ಅವಳಿಗೆ ಆರೋಗ್ಯ ಚೆನ್ನಾಗಿಲ್ಲ ಎಂದು ನಾವು ಕೇಳಿಕೊಂಡಿದ್ದೆವು.

ಇದನ್ನೂ ಓದಿ :ಮರಗೆಲಸಕ್ಕೆ ಬಂದಿದ್ದ ಇಬ್ಬರು ಯುವಕರು ವಿದ್ಯುತ್​ ತಂತಿ ತಗುಲಿ ಸಾ*ವು

ಸೋಮವಾರ ಸಮಾಜ ವಿಜ್ಞಾನ ಪರೀಕ್ಷೆಯನ್ನು ಬರೆಯಲು ಅವಳು ಶಾಲೆಗೆ ಹೋದಾಗ, ಶಾಲೆಯಲ್ಲಿ ಅವಳಿಗೆ ಪ್ರತ್ಯೇಕವಾಗಿ ಕೂರಲು ವ್ಯವಸ್ಥೆ ಮಾಡಿರಲಿಲ್ಲ. ಬದಲಾಗಿ, ಶಾಲಾ ಆಡಳಿತವು ಅವಳನ್ನು ತರಗತಿಯ ಹೊರಗಿನ ಮೆಟ್ಟಿಲುಗಳ ಮೇಲೆ ಕುಳ್ಳಿರಿಸಿ ಪರೀಕ್ಷೆ ಬರೆಸಿತು. ಅವಳು ಮೆಟ್ಟಿಲುಗಳ ಮೇಲೆ ಕುಳಿತು ಎರಡೂವರೆ ಗಂಟೆಗಳ ಕಾಲ ಪರೀಕ್ಷೆಯನ್ನು ಬರೆಯುತ್ತಿದ್ದಾಗ, ಕಾಲು ನೋವು ಬಂತು.

ನಿನ್ನೆ ನಾವು ಶಾಲೆಗೆ ಹೋಗಿ ನೋಡಿದಾಗ ಮಗಳು ಮತ್ತೊಂದು ತರಗತಿಯ ಮೆಟ್ಟಿಲುಗಳ ಮೇಲೆ ಕುಳಿತು ಪರೀಕ್ಷೆ ಬರೆಯುತ್ತಿರುವುದನ್ನು ಕಂಡಾಗ ಆಘಾತವುಂಟಾಯಿತು. ನಾವು ಶಾಲೆಯ ಅಧಿಕಾರಿಗಳನ್ನು ಈ ಬಗ್ಗೆ ವಿಚಾರಿಸಿದಾಗ, ಇದು ದೊಡ್ಡ ಸಮಸ್ಯೆಯೇ ಅಲ್ಲ ಎಂಬರ್ಥದಲ್ಲಿ ಉಡಾಫೆಯಿಂದ ಮಾತನಾಡಿದರು.

ಮಗಳು ಮೆಟ್ಟಿಲು ಮೇಲೆ ಕುಳಿತು ಪರೀಕ್ಷೆ ಬರೆಯುತ್ತಿರುವ ವಿಡಿಯೊವನ್ನು ನಮ್ಮ ಸಂಬಂಧಿಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡರು ಎಂದು ಹೇಳಿದರು.

RELATED ARTICLES

Related Articles

TRENDING ARTICLES