ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ನಲ್ಲಿ ಕ್ವಾರಂಟೈನ್ ಮಾಡಲಾಗಿರುವ ತಾಯಿ ಮಗನಿಗೆ ಊಟ ನೀಡುವ ವಿಚಾರವಾಗಿ ಸಾರ್ವಜನಿಕರು ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ನಡುವೆ ಮಾತಿನ ಸಮರವೇ ನಡೆದು ಹೋಗಿದೆ.
ಕಳೆದ ಎರಡು ದಿನಗಳಿಂದ ಕ್ವಾರಂಟೈನ್ ನಲ್ಲಿರುವವರಿಗೆ ಊಟದ ವ್ಯವಸ್ಥೆ ಸರಿಯಾಗಿಲ್ಲ ಎಂದು ಕ್ವಾರಂಟೈನ್ ನಲ್ಲಿದ್ದ ಯುವಕ ಮಾಡಿದ್ದ ವಿಡಿಯೋಗೆ ಸ್ಪಂದಿಸಿ ಸಾರ್ವಜನಿಕರು ಊಟದ ವ್ಯವಸ್ಥೆ ಮಾಡಿದ್ದರು, ಈ ಸಂಭಂಧ ಸ್ಥಳಕ್ಕೆ ಬಂದ ಹುಳಿಯಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆದಿದ್ದು. ಈ ನಡುವೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಸಾರ್ವಜನಿಕರೊರ್ವರಿಗೆ ಅವ್ಯಾಚ್ಯ ಶಬ್ದಗಳಿಂದ ಮಾತನಾಡಿದ್ದಲ್ಲದೇ ನಿಮ್ಮ ಹೆಂಡತಿ ತಲೆ ಹಿಡಿದು ಊಟ ಕೊಡ್ತೀನಿ ಎಂದು ಮಾತನಾಡಿದ್ದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಅಧಿಕಾರಿಗಳೇ ಈ ರೀತಿ ಅನುಚಿತವಾಗಿ ವರ್ತಿಸಿದ್ರೆ ಬಡವರು ಕರೋನಾ ರೋಗಿಗಳು ತಮ್ಮ ಕಷ್ಟವನ್ನು ಯಾರ ಬಳಿ ಹೇಳಿಕೊಳ್ಳೊದು ಎಂಬುದೇ ಇಲ್ಲಿ ಪ್ರಶ್ನೆಯಾಗಿದೆ. ಈ ಬಗ್ಗೆ ತುಮಕೂರು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಗಮನಹರಿಸಬೇಕಿದೆ.
ಹೇಮಂತ್ ಕುಮಾರ್. ಜೆ.ಎಸ್ ಪವರ್ ಟಿವಿ ತುಮಕೂರು..