ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ‘ಬಿಗ್ಬಾಸ್’ ಮಾಜಿ ಸ್ಪರ್ಧಿ ರಜನ್‌ನನ್ನು ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಜತ್‌ಗೆ ಪೊಲೀಸರು 2ಬಾರಿ ನೋಟಿಸ್ ನೀಡಿದ್ದರು. ಆದರೆ ರಜತ್ ಪೊಲೀಸ್ ವಿಚಾರಣೆಗೆ ಹಾಜರಾಗದೆ ಗೈರಾಗಿದ್ದರು. ಇದಕ್ಕೆ ಅಸಮಧಾನಗೊಂಡಿದ್ದ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ವಿಧಿಸಿತ್ತು. ಕೋರ್ಟ್ ಸೂಚನೆ ಮೇರೆಗೆ ರಜತ್ನನ್ನು ಪೊಲೀಸರು ಬಂಧಿಸಿದ್ದರು.
ಇದನ್ನೂ ಓದಿ :ಚೀನಾ ಮೇಲೆ ಶೇ. 245ರಷ್ಟು ಟಾರಿಫ್ ವಿಧಿಸಿದ ಟ್ರಂಪ್; ಎರಡು ದೇಶದ ಆರ್ಥಿಕತೆಗೆ ಏಟು
ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ರಜತ್ನನ್ನು 14 ದಿನಗಳ ನ್ಯಾಯಾಂಗಕ್ಕೆ ನೀಡಲಾಗಿದೆ. ಏಪ್ರೀಲ್ 29ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು. ರಜತ್ ಪರ ವಕೀಲರು ಜಾಮೀನಿಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಜಾಮೀನು ಆದೇಶವನ್ನು ನಾಳೆಗೆ ಕಾಯ್ದಿರಿಸಲಾಗಿದೆ.