ಬೆಂಗಳೂರು : ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ‘ಬಿಗ್ ಬಾಸ್’ ರಜತ್‌ಗೆ 24ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನಿ ನಿಯಮಗಳನ್ನು ಉಲ್ಲಂಘಿಸಿದ್ದ ರಜತ್‌ನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿ ನೆನ್ನೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು, ನ್ಯಾಯಧೀಶರು ರಜತ್‌ನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು. ಇದೀಗ ರಜತ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ರೀಲ್ಸ್ ಕೇಸ್‌ಗೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ರಜತ್‌ಗೆ 2 ಬಾರಿ ಪೊಲೀಸರು ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗದ ರಜತ್‌ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ ನಿನ್ನೆ (ಏ.16) ಕೋರ್ಟ್ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಆದೇಶದ ಅನ್ವಯ ರಜತ್ ಏ.29ರವರೆಗೆ ಪರಪ್ಪನ ಅಗ್ರಹಾರದಲ್ಲಿ ಇರಬೇಕಿತ್ತು.
ಇದನ್ನೂ ಓದಿ :ಅಕ್ರಮ ಸಂಬಂಧಕ್ಕೆ ಗಂಡನ ಕೊಲೆ; ಹಾವು ಕಚ್ಚಿ ಸಾವನ್ನಪ್ಪಿದ್ದಾನೆ ಎಂದಿದ್ದಳು ಕಿಲಾಡಿ ಪತ್ನಿ
ನೆನ್ನೆಯೆ ಜಾಮೀನಿಗೆ ಅರ್ಜಿ ಸಲ್ಲಿಸಿದ ರಜತ್ ಅರ್ಜಿಯನ್ನು ನಾಳೆಗೆ ಮುಂದೂಡಿದ ನ್ಯಾಯಾಲಯ. ಇಂದು ವಿಚಾರಣೆ ನಡೆಸಿ ರಜತ್‌ಗೆ ಜಾಮೀನು ಮಂಜೂರು ಮಾಡಿದೆ.