ಬಾಗಲಕೋಟೆ : ಚಾಲಕ ನಿಯಂತ್ರಣ ಕಳೆದುಕೊಂಡ ಸಾರಿಗೆ ಬಸ್ ಕಂದಕಕ್ಕೆ ಉರುಳಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದ್ದು. ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.
ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಸೇತುವೆ ಬಳಿ ದುರ್ಘಟನೆ ಸಂಭವಿಸಿದ್ದು. ಅಥಣಿಯಿಂದ ಜಮಖಂಡಿ ಕಡೆಗೆ ಬರುತ್ತಿದ್ದ KA-23-F-6783 ನಂಬರ್‌ನ ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.
ಇದನ್ನೂ ಓದಿ :ಜನಾಕ್ರೋಶ ಯಾತ್ರೆಗೆ ಜನರ ಬೆಂಬಲ ಇಲ್ಲ; ವಿಜಯೇಂದ್ರ ವಿರುದ್ದ ಯತ್ನಾಳ್ ವಾಗ್ದಾಳಿ
ಅಪಘಾತದಲ್ಲಿ ಬಸ್ನಲ್ಲಿದ್ದ ಏಳೆಂಟು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು. ಸ್ಥಳೀಯರು ಬಸ್ನ ಹಿಂಬದಿಯ ಗಾಜು ಒಡೆದು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರೋಡ್ ಬ್ರೇಕರ್ ದಾಟಿಸುವಾಗ ಬಸ್ಸಿನ ಪಾಟಾ ಮುರಿದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.