Thursday, May 15, 2025

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ 2 ತಂಡ ರಚಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿರುವ ರೆಸಾರ್ಟ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದು. ಈ ದಾಳಿಯಲ್ಲಿ ಕರ್ನಾಕಟ ಮೂಲದ ಮಂಜುನಾಥ್​ ರಾವ್​ ಎಂಬುವವರು ಸಾವನ್ನಪ್ಪಿದ್ದಾರೆ. ಇದೀಗ ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಎರಡು ತಂಡಗಳನ್ನು ರಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾಶ್ಮೀರದ ಪಹಲ್ಗಾಮ್​ನಲ್ಲಿ ಇನ್ನು 40ಕ್ಕೂ ಹೆಚ್ಚು ಕನ್ನಡಿಗರು ಸಿಲುಕಿರುವ ಶಂಕೆ ಇದ್ದು. ಅವರನ್ನು ಸುರಕ್ಷಿತವಾಗಿ ರಕ್ಷಿಸಿ ರಾಜ್ಯಕ್ಕೆ ಕರೆತರಲು ರಾಜ್ಯ ಸರ್ಕಾರ ಕಾರ್ಯಮುಖವಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಎರಡು ತಂಡಗಳನ್ನು ನೇಮಿಸಿದ್ದು. ಕ್ರೀಡಾ ಇಲಾಖೆಯ ಆಯುಕ್ತ ಚೇತನ್ ನೇತೃತ್ವದ ತಂಡ ನಿಯೋಜನೆಯಾಗಿದೆ. ಒಂದು ತಂಡಕ್ಕೆ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರುವ ಹೊಣೆ ಇದ್ದರೆ. ಮತ್ತೊಂದು ತಂಡ ಮೃತ ಮಂಜನಾಥ್ ಮೃತದೇಹ ತರುವ ಹೊಣೆ ನೀಡಲಾಗಿದೆ.

ಇದನ್ನೂ ಓದಿ :ಜಮ್ಮು ಕಾಶ್ಮೀರದಲ್ಲಿ ಭೀಕರ ಉಗ್ರ ದಾಳಿ: ಶಿವಮೊಗ್ಗ ಮೂಲದ ಉದ್ಯಮಿ ಸಾ*ವು

ಪ್ರಧಾನಿ ಮೋದಿ ಸಂತಾಪ..!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಪ್ರಧಾನಿ ಮೋದಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು. ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ. ಈ ಘೋರ ಕೃತ್ಯದ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು. ಅವರನ್ನು ಬಿಡಲಾಗುವುದಿಲ್ಲ! ಅವರ ದುಷ್ಟ ಕಾರ್ಯಸೂಚಿ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ.

RELATED ARTICLES

Related Articles

TRENDING ARTICLES