ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಎಂ.ಜಿ ರಸ್ತೆಯಲ್ಲಿರುವ ಚಿನ್ನಾಭರಣದ ಅಂಗಡಿಯ ಮಾಲೀಕನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು ಚಿನ್ನಾಭರಣಗಳನ್ನು ದರೋಡೆ ಮಾಡುವ ಯತ್ನ ನಡೆಸಿದ್ದಾರೆ. ಅದೃಷ್ಟವಶಾತ್ ಕೇಸರಿ ಜುವೆಲ್ಲರಿ ಮಾಲಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಲ್ಸರ್ ಬೈಕ್ ನಲ್ಲಿ ಬಂದ ಮೂರು ಜನ ದುಷ್ಕರ್ಮಿಗಳು ಕೇಸರಿ ಜ್ಯೂಯಲರ್ಸ್ ಮಾಲೀಕರಾದ ಜಸ್ಸು ಎಂಬುವವರ ಮೇಲೆ ಶನಿವಾರ ಹನ್ನೊಂದು ಗಂಟೆ ಸುಮಾರಿಗೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಜಾಮಾಯಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ದುಷ್ಕರ್ಮಿಗಳನ್ನು ಪತ್ತೆ ಮಾಡಲು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೆಳ್ಳಂಬೆಳಗ್ಗೆ ನಡೆದ ಕೃತ್ಯದಿಂದ ನಗರದ ಜನತೆ ಬೆಚ್ಚಿ ಬಿದ್ದಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯ ಅಸ್ಪಷ್ಟ ರೀತಿಯಲ್ಲಿ ಕಾಣಿಸುತ್ತಿದ್ದು ಪೊಲೀಸರು ಪ್ರಕರಣ ಚುರುಕುಗೊಳಿಸಿದ್ದಾರೆ…
ಸಚಿನ್ ಶೆಟ್ಟಿ ಪವರ್ ಟಿವಿ ಚಿಕ್ಕಮಗಳೂರು..