ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ 26 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಯನ್ನು ಖಂಡಿಸಿ ದೇಶದಾದ್ಯಂತ ಖಂಡನೆ ವ್ಯಕ್ತವಾಗುತ್ತಿದ್ದು. ಕನ್ನಡದ ನಟ-ನಟಿಯರು ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಆಕ್ಷನ್ ಪ್ರಿನ್ಸ್ ಧ್ರುವಸರ್ಜಾ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಭಾರತದ ಕಳಸದಂತಿರುವ ಕಾಶ್ಮೀರ ಎಂದಿಗೂ ನಮ್ಮದೆ ಎಂದು ಹೇಳಿದ್ದಾರೆ.
ಪಹಲ್ಗಾಮ್ ಉಗ್ರ ದಾಳಿಯ ಬಗ್ಗೆ ನಟ ಧ್ರುವ ಸರ್ಜಾ ಸಾಮಾಜಿಕ ಜಾಲತಾಣ ಎಕ್ಷ್ನಲ್ಲಿ ಬರೆದುಕೊಂಡಿದ್ದು. “ಭಾರತಾಂಬೆಯ ಕಳಶದಂತಿರುವ ಜಮ್ಮು ಮತ್ತು ಕಾಶ್ಮೀರ ಎಂದಿಗೂ ನಮ್ಮದೆ. ಪಹಲ್ಗಾಮ್‌ನಲ್ಲಿ ಉಗ್ರರು, ಅಮಾಯಕರ ಮೇಲೆ ನಡೆಸಿದಂತ ಕೃತ್ಯ ಎಂದಿಗೂ ಯಾರೂ ಕ್ಷಮಿಸಲಾಗದು. ಎಲ್ಲಾ ಧರ್ಮದ ಸಾರ ಪ್ರೀತಿ ಹಾಗೂ ಅಹಿಂಸೆ. ಪ್ರೀತಿಯಿಂದ ಸಾಧಿಸಲಾಗದ್ದು, ಹಿಂಸೆ ಹಾಗೂ ದ್ವೇಷದಿಂದ ಸಾಧಿಸಲು ಸಾಧ್ಯವೇ ಇಲ್ಲ.
ಭಾರತಾಂಬೆಯ ಕಳಶದಂತಿರೋ ಜಮ್ಮು ಮತ್ತು ಕಾಶ್ಮೀರ ಎಂದಿಗೂ ನಮ್ಮದೆ..
ಪಹಲ್ಗಾಮ್ ನಲ್ಲಿ ಉಗ್ರರು, ಅಮಾಯಕರ ಮೇಲೆ ನಡೆಸಿದಂತ ಕೃತ್ಯ ಎಂದಿಗೂ ಯಾರೂ ಕ್ಷಮಿಸಲಾಗದು.
ಎಲ್ಲಾ ಧರ್ಮದ ಸಾರ ಪ್ರೀತಿ ಹಾಗೂ ಅಹಿಂಸೆ. ಪ್ರೀತಿಯಿಂದ ಸಾಧಿಸಲಾಗದ್ದು ಹಿಂಸೆ ಹಾಗೂ ದ್ವೇಷದಿಂದ ಸಾಧಿಸಲು ಸಾಧ್ಯವೇ ಇಲ್ಲ.
ಪ್ರಾಣ ಬಿಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ… pic.twitter.com/txUq3cwVAv— Dhruva Sarja (@DhruvaSarja) April 23, 2025
ಇದನ್ನೂ ಓದಿ :Pahalgam Attack: ಕಲ್ಮಾ ಹೇಳಿ ಜೀವ ಉಳಿಸಿಕೊಂಡ ಅಸ್ಸಾಂ ವಿಶ್ವವಿದ್ಯಾಲಯದ ಪ್ರೊಫೆಸರ್
ಪ್ರಾಣ ಬಿಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ. ಕಳೆದುಕೊಂಡವರ ಕುಟುಂಬಗಳಿಗೆ ದೇವರು ಧೈರ್ಯ ಕರುಣಿಸಲಿ ಎಂದು ಧ್ರುವ ಸರ್ಜಾ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಜೈ ಹಿಂದ್, ಜೈ ಭಾರತ, ಜೈ ಆಂಜನೇಯ ಎಂದು ಹೇಳಿದ್ದಾರೆ.