Friday, April 25, 2025

ರಾಜನಾಥ್​ ಸಿಂಗ್​ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಆರಂಭ: ರಾಹುಲ್​, ಖರ್ಗೆ ಹಾಜರ್

ನವದೆಹಲಿ : ಪಹಲ್ಗಾಂನಲ್ಲಿ ನಡೆದಿರುವ ಉಗ್ರದಾಳಿಗೆ ರಾಷ್ಟ್ರದೆಲ್ಲಡೆ ಆಕ್ರೋಶ ವ್ಯಕ್ತವಾಗುತ್ತಿದ್ದು. ಕೇಂದ್ರ ಸರ್ಕಾರ ರಕ್ಷಣ ಸಚಿವ ರಾಜನಾಥ್​ ಸಿಂಗ್​ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆದಿದೆ. ದೆಹಲಿಯಲ್ಲಿ ಸರ್ವಪಕ್ಷ ಸಭೆ ಆರಂಭವಾಗಿದ್ದು, ಈ ಸಭೆಗೆ ಅಮಿತ್​ ಷಾ, ರಾಜನಾಥ್​ ಸಿಂಗ್​, ಮಲ್ಲಿಕಾರ್ಜುನ್​ ಖರ್ಗೆ, ರಾಹುಲ್​ ಗಾಂಧಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಮಂಗಳವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯಿಂದ ಇಡೀ ದೇಶ ದುಃಖಿತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಭಯೋತ್ಪಾದನೆಯನ್ನು ಹತ್ತಿಕ್ಕಲು ಮತ್ತು ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ನಿರಂತರವಾಗಿ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ. ಇದನ್ನೂ ಓದಿ :BSF ಯೋಧನನ್ನು ವಶಕ್ಕೆ ಪಡೆದ ಪಾಕ್​ ಸೇನೆ: ಹದ್ದುಮೀರಿ ವರ್ತಿಸುತ್ತಿರುವ ಪಾಕಿಗಳು

ಈಗಾಗಲೇ ಭಯೋತ್ಪಾದಕ ದಾಳಿಯ ವಿರುದ್ಧ ಕ್ರಮ ಕೈಗೊಳ್ಳಲು ಬುಧವಾರ( ಏಪ್ರೀಲ್​.23) ಪ್ರಧಾನಿಯವರ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ಸೇರಿತು. ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ :ರಾಷ್ಟ್ರಪತಿ ಭೇಟಿ ಮಾಡಿದ ಅಮಿತ್​ ಷಾ, ಜೈ ಶಂಕರ್​: ಕಾಶ್ಮೀರಕ್ಕೆ ಸೇನಾ ಮುಖ್ಯಸ್ಥ, ಮಿತ್ರ ರಾಷ್ಟ್ರಗಳಿಗೆ ಮಾಹಿತಿ

ಇಂದು ನಡೆಯುತ್ತಿರುವ ಸರ್ವಪಕ್ಷ ಸಭೆಯಲ್ಲಿ ಕೇಂದ್ರವು ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಮಾಹಿತಿ ನೀಡಲಿದ್ದು, ಅವರ ಅಭಿಪ್ರಾಯಗಳನ್ನು ಕೇಳಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಯಕರಿಗೆ ಮಾಹಿತಿ ನೀಡುವ ನಿರೀಕ್ಷೆಯಿದೆ. 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಅಥವಾ 2020 ರ ಭಾರತ-ಚೀನಾ ಬಿಕ್ಕಟ್ಟಿನ ಸಮಯದಲ್ಲಿ ಕಂಡುಬಂದಂತೆ, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸಮಸ್ಯೆ ಎದುರಾಗಿದೆ, ಹೀಗಾಗಿ ಸರ್ವಪಕ್ಷ ಸಭೆ ಕರೆಯಲಾಗಿದೆ.

RELATED ARTICLES

Related Articles

TRENDING ARTICLES