ಆಂಧ್ರಪ್ರದೇಶ : ಮೊಬೈಲ್ ಕಸಿದುಕೊಂಡ ಶಿಕ್ಷಕಿಗೆ ವಿದ್ಯಾರ್ಥಿನಿಯೊಬ್ಬಳು ಚಪ್ಪಲಿಯಲ್ಲಿ ಹೊಡೆದಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.
ಈ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದ್ದು. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ವಿದ್ಯಾರ್ಥಿನಿ ಕಾಲೇಜು ಕ್ಯಾಪಸ್ನಲ್ಲಿ ಫೋನಿನಲ್ಲಿ ಮಾತನಾಡುತ್ತಿದ್ದನ್ನು ಕಂಡ ಶಿಕ್ಷಕಿ ಆಕೆಯಿಂದ ಫೋನ್ ಕಸಿದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿನಿ ನೇರವಾಗಿ ತನ್ನ ಶಿಕ್ಷಕಿಯ ಮೇಲೆಯೇ ಕೈ ಮಾಡಿದ್ದಾಳೆ. ಇದನ್ನೂ ಓದಿ :ಶಿಮ್ಲಾ ಒಪ್ಪಂದಕ್ಕೆ ಸಹಿ ಹಾಕಿದ್ದ ಮೇಜಿಂದ ಪಾಕ್ ಧ್ವಜವನ್ನು ತೆರವುಗೊಳಿಸಿದ ಭಾರತ
ಪೋನ್ ಕಸಿದುಕೊಂಡ ಶಿಕ್ಷಕಿಯ ಮೇಳೆ ಕೋಪಗೊಂಡ ವಿದ್ಯಾರ್ಥಿನಿ ಮೊದಲಿಗೆ ತನ್ನ ಶಿಕ್ಷಕಿಯ ಜೊತೆ ವಾಗ್ವಾದಕ್ಕೆ ಇಳಿದಿದ್ದಾಳೆ. ಶಿಕ್ಷಕಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದಿದ್ದಾಳೆ. ಆದರೆ ಶಿಕ್ಷಕಿ ಪೋನ್ ಕೊಡಲು ಒಪ್ಪದ ಹಿನ್ನಲೆ ಕಾಲಿನಲ್ಲಿದ್ದ ಚಪ್ಪಲಿಯಿಂದ ತನ್ನ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿದ್ದಾಳೆ. ಈ ಕುರಿತಾದ ವಿಡಿಯೋ @DrSrinubabu ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ :ಪಾಕ್ ಜೊತೆ ಯುದ್ದದ ಅನಿವಾರ್ಯತೆ ಇಲ್ಲ, ಕೇಂದ್ರ ಸರ್ಕಾರ ಜನರಿಗೆ ಟೋಪಿ ಹಾಕಿದೆ: ಸಿಎಂ ಸಿದ್ದರಾಮಯ್ಯ
ಘಟನೆಗೆ ಸಂಬಂಧಿಸಿದ ವಿಡಿಯೋವನ್ನು ಅಲ್ಲಿದ್ದ ವಿದ್ಯಾರ್ಥಿಗಳು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದ್ದಾರೆ. ಜೊತೆಗೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಘು ಕಾಲೇಜು ಆಡಳಿತ ಮಂಡಳಿ ವಿಚಾರಣೆ ನಡೆಸಿದ್ದು, ವಿದ್ಯಾರ್ಥಿನಿ ಕೋಪಗೊಂಡು ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾಳೆಂದು ತಿಳಿದುಬಂದಿದೆ. ಶಿಕ್ಷಕಿಯ ಮೇಲೆ ಕೈ ಮಾಡಿದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.