Friday, May 2, 2025

KSRTC ಬಸ್​ನಲ್ಲಿ ನಮಾಜ್​ ಮಾಡಿದ್ದ ಎ.ಆರ್​ ಮುಲ್ಲಾ ಕೆಲಸದಿಂದ ಅಮಾನತು

ಹುಬ್ಬಳ್ಳಿ: ಪ್ರಯಾಣಿಕರಿದ್ದ ಬಸ್​ನ್ನು ಸೈಡಿಗೆ ಹಾಕಿ ಬಸ್​ನಲ್ಲೇ ನಮಾಜ್​ ಮಾಡಿದ್ದ ಘಟನೆ ಹಾವೇರಿಯಲ್ಲಿ ನಡೆದಿತ್ತು. ಈ ಘಟನೆಗೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದ್ದು. ಚಾಲಕನ ನಡೆಗೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಇದೀಗ ಕರ್ತವ್ಯಲೋಪದ ಆಧಾರದ ಮೇಲೆ ಚಾಲಕನನ್ನು ಕೆಲಸದಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.

ಏನಿದು ಘಟನೆ..!

ಮಂಗಳವಾರ ಅಂದರೆ ಏಪ್ರಿಲ್ 29 ರಂದು ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಹೋಗುವ ಬಸ್​ನ ಚಾಲಕ-ಕಂ-ನಿರ್ವಾಹಕ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದನು. ಚಾಲಕ-ಕಂ-ನಿರ್ವಾಹಕ ನಮಾಜ್​ ಮಾಡುತ್ತಿರುವುದನ್ನು ಪ್ರಯಾಣಿಕರೊಬ್ಬರು ಮೊಬೈಲ್​ ಕ್ಯಾಮೆರಾದಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗುತ್ತಿದ್ದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ. ಅವರಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ :ಪಹಲ್ಗಾಮ್ ಉಗ್ರ​ ದಾಳಿ: ಸಶಸ್ತ್ರ ಪಡೆಗಳ ಸ್ಥೈರ್ಯ ಕುಗ್ಗಿಸಬೇಡಿ ಎಂದ ಸುಪ್ರೀಂ ಕೋರ್ಟ್​

ಇದೀಗ ಘಟನೆ ಬಗ್ಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿಸ್ತುಪಾಲನೆ ಅಧಿಕಾರಿ ಕ್ರಮ ಕೈಗೊಂಡಿದ್ದು. ಚಾಲಕನನ್ನು ಕೆಲಸದಿಂದ ಅಮಾನತುಗೊಳಿಸಿದ್ದಾರೆ. ಕರ್ತವ್ಯಲೋಪ ಆರೋಪದಲ್ಲಿ ಅಮಾನತ್ತುಗೊಳಿಸಿ ಆದೇಶಿಸಿದ್ದು. ಘಟನೆ ಬಗ್ಗೆ ವಿವರಣೆ ನೀಡಲು ಸೂಚನೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES