ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅಂತ್ಯಸಂಸ್ಕಾರ ನೆರವೇರಿದ್ದು. ಬಂಟ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿದೆ. ಇನ್ನು ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ಸುಹಾಸ್ ಶೆಟ್ಟಿ ಅಂತಿಮ ದರ್ಶನ ಪಡೆದು ಮಾಧ್ಯಮದೊಂದಿಗೆ ಮಾತನಾಡಿದ್ದು. ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಲು ತಿರ್ಮಾನಿಸಿದ್ದೇವೆ ಎಂದು ಹೇಳಿದರು.
ನೆನ್ನೆ ರಾತ್ರಿ ಭೀಕರವಾಗಿ ಹತ್ಯೆಯಾಗಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅಂತ್ಯಕ್ರಿಯೆ ನೆರವೇರಿದ್ದು. ಬಂಟ್ವಾಳದ ಕಾರಿಂಜ ಗ್ರಾಮದಲ್ಲಿರುವ ಸುಹಾಸ್ ಮನೆಯ ಪಕ್ಕದಲ್ಲಿನ ತೋಟದಲ್ಲಿ ಬಂಟ ಸಂಪ್ರದಾಯದಂತೆ ಸುಹಾಸ್ ಶೆಟ್ಟಿ ಅಂತ್ಯಕ್ರಿಯೆ ನೆರವೇರಿದೆ. ಅಂತ್ಯಕ್ರಿಯೆಯಲ್ಲಿ ರಾಜಕೀಯ ಮುಖಂಡರು, ಹಿಂದೂಪರ ಕಾರ್ಯಕರ್ತರು ಸೇರಿದಂತೆ ಕುಟುಂಬಸ್ಥರು ಭಾಗಿಯಾಗಿದ್ದರು.
ಇದನ್ನೂ ಓದಿ:ಸಾಂಬಾರ್ ವಿಷಯಕ್ಕೆ ಜಗಳ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪರಲೋಕಕ್ಕೆ ಕಳುಹಿಸಿದ ಪತಿರಾಯ
25 ಲಕ್ಷ ಪರಿಹಾರ ಘೋಷಿಸಿದ ವಿಜಯೇಂದ್ರ..!
ಸುಹಾಸ್ ಶೆಟ್ಟಿ ಅಂತಿಮ ದರ್ಶನ ಪಡೆದು ಮಾತನಾಡಿದ ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ‘ ಸುಹಾಸ್ ಹತ್ಯೆ ರಾಜ್ಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕಾಶ್ಮೀರ ಪಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಘಟನೆ ನಡೆದಿರುವುದು ಖಂಡನಾರ್ಹ, ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಪೊಲೀಸ್ ಇಲಾಖೆ ವೈಫಲ್ಯ ಮೇಲ್ನೋಟಕ್ಕೆ ಕಂಡು ಬರ್ತಿದೆ. ಈ ಪ್ರಕರಣವನ್ನ NIA ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ :ಅನೈತಿಕ ಸಂಬಂಧ: ಪತ್ನಿ, ಪ್ರಿಯಕರನನ್ನು ಕೊಚ್ಚಿ ಕೊಲೆ ಮಾಡಿದ ಗಂಡ
ಮುಂದುವರಿದು ಮಾತನಾಡಿದ ವಿಜಯೇಂದ್ರ ‘ ಸುಹಾಸ್ ಹತ್ಯೆ ಪ್ರಕರಣದಲ್ಲಿ ಪೊಲೀಸರ ವೈಪಲ್ಯ ಎದ್ದು ಕಾಣುತ್ತಿದೆ. ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ಇದೆ. ಕಾಂಗ್ರೆಸ್ ಸರ್ಕಾರದ ಮೇಲೆ ವಿಶ್ವಾಸ ಇಲ್ಲದಾಗಿದೆ. ಸುಹಾಸ್ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದೇವೆ. ಅವರ ಕುಟುಂಬಕ್ಕೆ ಧೈರ್ಯ ಹೇಳುವ ಪ್ರಯತ್ನ ಮಾಡಿದ್ದೇವೆ. ಬಿಜೆಪಿಯ ಮುಖಂಡರು, ಕಾರ್ಯಕರ್ತರು ಅವರ ಕುಟುಂಬದ ಜೊತೆ ಇದ್ದೇವೆ.
ಆದರೆ ಆ ಕುಟುಂಬದ ಆಧಾರ ಸ್ತಂಭ ಕಳಚಿ ಬಿದ್ದಂತಾಗಿದೆ. ಪಕ್ಷದ ಪರವಾಗಿ 25 ಲಕ್ಷ ಪರಿಹಾರ ನೀಡುವ ತೀರ್ಮಾನ ಮಾಡಿದ್ದೇವೆ. ಮುಖ್ಯಮಂತ್ರಿ, ಗೃಹಸಚಿವರು ಘಟನೆಯ ಗಂಭೀರತೆ ಅರ್ಥ ಮಾಡಿಕೊಳ್ಳಬೇಕು
ಸರ್ಕಾರದಿಂದ ಪರಿಹಾರ ನೀಡಬೇಕು, ಎನ್ಐಎಯಿಂದ ಘಟನೆ ಬಗ್ಗೆ ತನಿಖೆಯಾಗಬೇಕು. ರಾಜ್ಯ ಸರ್ಕಾರ ಈ ತರ ಘಟನೆ ನಡೆದಾಗ ಹಿಂದೂ ಕಾರ್ಯಕರ್ತರ ಪರವಾಗಿ ನಿಂತಿಲ್ಲ. ಸರ್ಕಾರಕ್ಕೆ ಮನುಷ್ಯತ್ವ ಇದ್ರೆ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಹೇಳಿದರು.