Thursday, January 16, 2025

ಶಿವಮೊಗ್ಗದಲ್ಲಿಯೂ ಲಾಕ್ ಡೌನ್ ಗೆ ಚಿಂತನೆ – ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ : ಇನ್ನು ಶಿವಮೊಗ್ಗದಲ್ಲಿ ಕೊರೋನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಲಾಕ್ ಡೌನ್ ಮಾಡುವ ಬಗ್ಗೆ ಕೂಗು ಕೇಳಿ ಬರುತ್ತಿದೆ. ಸಾರ್ವಜನಿಕರಿಂದಲೇ, ಲಾಕ್ ಡೌನ್ ಮಾಡಿದರೆ ಒಳ್ಳೆಯದಪ್ಪಾ ಎಂಬ ಪ್ರತಿಕ್ರಿಯೇ ಕೇಳಿ ಬರ್ತಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ, ಜಾರಿಗೊಳಿಸಲಾಗುತ್ತಿರುವ ಲಾಕ್ ಡೌನ್ ಶಿವಮೊಗ್ಗದಲ್ಲಿಯೂ ವಿಸ್ತರಿಸಬೇಕೆಂಬ ಮನವಿ ಸಾರ್ವಜನಿಕರಿಂದ ಬಂದಿದೆ. ಈಗಾಗಲೇ, ನಗರದಲ್ಲಿನ ವರ್ತಕರ ಸಂಘದ ವತಿಯಿಂದ, ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಸ್ವಯಂ ನಿರ್ಬಂಧ ಹಾಕಿಕೊಳ್ಳಲಾಗಿದೆ. ಸೋಂಕು ನಿಯಂತ್ರಣಕ್ಕೆ ಬರುವವರೆಗೂ, ನಾಗರೀಕರ ಆರೋಗ್ಯದ ದೃಷ್ಟಿಯಿಂದ, ಲಾಕ್ ಡೌನ್ ಅನಿವಾರ್ಯವಾಗಿದೆ. ಪ್ರಸ್ತುತ ನಗರದಾದ್ಯಂತ, ಸಮುದಾಯದಲ್ಲಿ ಸೋಂಕು ವ್ಯಾಪಿಸುತ್ತಿದ್ದು, ಈ ಎಲ್ಲಾ ಹಿನ್ನೆಲೆಯಲ್ಲಿ, ನಾಳೆ ಮಂಗಳವಾರ ಜಿಲ್ಲಾಡಳಿತದ ಜೊತೆ ಚರ್ಚಿಸಿ, ಲಾಕ್ ಡೌನ್ ಬೇಕೆ ಬೇಡವೇ ಎಂಬುದರ ಬಗ್ಗೆ ತೀರ್ಮಾನಿಸುವುದಾಗಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಮಾಡಲಾಗಿದ್ದು, ಈಗಾಗಲೇ, ಬೆಂಗಳೂರಿನಲ್ಲಿ ಲಾಕ್ ಡೌನ್ ಮಾಡಲಾಗಿದೆ. ಅದೇರೀತಿ, ಕರ್ನಾಟಕದಲ್ಲಿ ಸಹ ಕೊರೋನಾ ಸೋಂಕು ಹೆಚ್ಚುತ್ತಿದೆ. ಶಿವಮೊಗ್ಗದಲ್ಲೂ ಕೂಡ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರು ಹೆಚ್ಚಾಗುತ್ತಿದ್ದಾರೆ. ಹೀಗಾಗಿ, ಶಿವಮೊಗ್ಗದಲ್ಲಿ ವರ್ತಕರೇ ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನ ಬಂದ್ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಈ ಬಗ್ಗೆ ಕೂಲಂಕುಷವಾಗಿ, ಶಿವಮೊಗ್ಗ ಜಿಲ್ಲೆ ಲಾಕ್ ಡೌನ್ ಕುರಿತು ನಾಳೆ ಜಿಲ್ಲಾಧಿಕಾರಿ ಜೊತೆ ಚರ್ಚೆ ನಡೆಸುತ್ತೇನೆ. ಚರ್ಚೆಯ ಬಳಿಕ ಲಾಕ್ ಡೌನ್ ಮಾಡಬೇಕಾ. ಅಥವಾ ಬೇಡವಾ ಎಂಬುದರ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತೆ ಅಂತಾ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

RELATED ARTICLES

Related Articles

TRENDING ARTICLES