ಧಾರವಾಡ : ದಿನದಿಂದ ದಿನಕ್ಕೆ ಧಾರವಾಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಜುಲೈ 15 ರಿಂದ 24 ರ ರಾತ್ರಿ 8 ಘಂಟೆಯವರೆಗೆ ಜಿಲ್ಲೆಯಾಧ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಸಂಬಂದ ಧಾರವಾಡದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸುಧಿರ್ಘ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಕೋವಿಡ 19 ಮಹಾಮಾರಿಯನ್ನು ನಿಯಂತ್ರಣಕ್ಕೆ ತರಲು 10 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿದೆ ಎಂದರು.
ಜನರು ಅನವಶ್ಯಕವಾಗಿ ಹೊರಗೆ ಬರಬಾರದೆಂದು ಮನವಿ ಮಾಡಿರುವ ಸಚಿವ ಶೆಟ್ಟರ , ಕಡ್ಡಾಯವಾಗಿ ಮಾಸ್ಕ ಧರಿಸಿಕೊಂಡು ಸಾಮಾಜೀಕ ಅಂತರ ಕಾಪಾಡಿಕೊಳ್ಳಬೇಕೆಂದು ತಿಳಿಸಿದರು. ಇದೇ ವೇಳೆ ಮಾತನಾಡಿದ ಅವರು, ಕೃಷಿ ಕೈಗಾರಿಕೆ, ಜೀವನಾವಶ್ಯಕ ವಹಿವಾಟಿಗೆ ಈ ಲಾಕ್ ಡೌನ್ ನಿಂದ ವಿನಾಯ್ತಿ ನೀಡಲಾಗಿದೆ ಎಂದರು.