ಬಿಗ್ಬಾಸ್ ಸೀಸನ್ 11ರ ಖ್ಯಾತಿಯ ಚೈತ್ರಾ ಕುಂದಾಪುರ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಎಂಬುವವರ ಜೊತೆ ಹಸೆಮಣೆ ಏರಿದ್ದಾರೆ. ಇವರಿಬ್ಬರು ಕಾಲೇಜು ದಿನಗಳಿಂದಲೂ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಚೈತ್ರಾ ಮತ್ತು ಶ್ರೀಕಾಂತ್ 12 ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಸಮ್ಮತಿಯೊಂದಿಗೆ ಪ್ರೀತಿಸಿದ ಹುಡುಗನೊಂದಿಗೆ ಸರಳ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್, ಗೋಲ್ಡ್ ಸುರೇಶ್ ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿದ್ದಾರೆ.
ಇದನ್ನೂ ಓದಿ :ಭಾರತದ ವಿರುದ್ದ ಯುದ್ದ ಮಾಡುವುದು ಮುಸ್ಲಿಂರ ಕರ್ತವ್ಯ: ಜಿಹಾದ್ ಕರೆಕೊಟ್ಟ ಆಲ್ಖೈದಾ
ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ಕಶ್ಯಪ್ ಕಾಲೇಜು ದಿನಗಳಿಂದಲೂ ಪರಸ್ಪರ ಪ್ರೀತಿಸುತ್ತಿದ್ದರು. ಇವರು ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇನ್ನು ಶ್ರೀಕಾಂತ್ ಬಗ್ಗೆ ಹೇಳುವುದಾದರೆ ‘ ಶ್ರೀಕಾಂತ್ ಕಶ್ಯಪ್ ಮೂಲತಃ ಉಡುಪಿ ಜಿಲ್ಲೆಯ ಹಿರಿಯಡ್ಕ ಪಟ್ಟಣದವರು. ಆನಿಮೇಷನ್ ಓದಿದ್ದರೂ ವಾಸ್ತು ಹಾಗೂ ಜ್ಯೋತಿಷ್ಯ ಶಾಸ್ತ್ರದಲ್ಲಿ ಹೆಚ್ಚು ಆಸಕ್ತಿ ಇದೆ. ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸದಲ್ಲಿ ಶ್ರೀಕಾಂತ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.