Saturday, May 10, 2025

ಪಾಕ್​ನಿಂದ ಶೆಲ್​ ದಾಳಿ: ಜಮ್ಮುವಿನ ಹಿರಿಯ ಅಧಿಕಾರಿ ಸೇರಿದಂತೆ, ಇಬ್ಬರು ನಾಗರಿಕರು ಸಾ*ವು

ಜಮ್ಮು-ಕಾಶ್ಮೀರ : ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಮೇಲೆ ಆಪರೇಷನ್​ ಸಿಂಧೂರ್​ ಹೆಸರಿನಲ್ಲಿ ಕಾರ್ಯಚರಣೆ ಕೈಗೊಂಡಿದ್ದು. ಇದರಿಂದಾಗಿ ಎರಡು ದೇಶದ ಗಡಿಗಳಲ್ಲಿ ತೀವ್ರ ಉದ್ವಿಘ್ನತೆ ಏರ್ಪಟ್ಟಿದೆ. ಇದರ ನಡುವೆ ಪಾಕಿಸ್ತಾನದ ಫಿರಂಗಿ ದಾಳಿಗೆ ಜಮ್ಮು ಕಾಶ್ಮೀರದ ಹಿರಿಯ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ನಿನ್ನೆ ರಾತ್ರಿ (ಮೇ.09) ಪಾಕಿಸ್ತಾನ ಭಾರತದ ಮೇಲೆ ಡ್ರೋನ್​ ಮತ್ತು ಪ್ರೋಜಕ್ಟೈಲ್​ಗಳ ಮೂಲಕ ಸರಣಿ ದಾಳಿ ನಡೆಸಿದ್ದು. ಇದಕ್ಕೆ ಪ್ರತಿಯಾಗಿ ಭಾರತವೂ ಕೂಡ ವಾಯುದಾಳಿ ಮೂಲಕ ಪಾಕಿಗಳಿಗೆ ಉತ್ತರಿಸಿದೆ. ಆದರೆ ಇಂದು ಮುಂಜಾನೆ ಪಾಕಿಸ್ತಾನ ನಡೆಸಿದ ಫಿರಂಗಿ ದಾಳಿಗೆ ಜಮ್ಮು-ಕಾಶ್ಮೀರದ ಹಿರಿಯ ಅಧಿಕಾರಿ ರಾಜ್ ಕುಮಾರ್ ಥಾಪಾ (55) ಮೃತಪಟ್ಟಿದ್ದು. ಜೊತೆಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ :ಪಾಕಿಸ್ತಾನದ ಸೇನಾ ನೆಲೆ ಮತ್ತು ಡ್ರೋನ್​ ಲಾಂಚ್​ಪ್ಯಾಡ್​​ಗಳನ್ನು ಧ್ವಂಸಗೊಳಿಸಿದ ಭಾರತ

ರಜೌರಿಯ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಜ್ ಕುಮಾರ್ ಥಾಪಾ (55) ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು, ಸಾಮಾಜಿಕ ಜಾಲತಾಣ ಎಕ್ಷ್​ನಲ್ಲಿ ಸಂತಾಪ ವ್ಯಪ್ತಪಡಿಸಿದ್ದು. ಅವರೊಟ್ಟಿಗೆ ಕಳೆದ ಸಮಯವನ್ನು ನೆನಪಿಸಿಕೊಂಡಿದ್ದಾರೆ.

ಈ ಕುರಿತು ಒಮರ್ ಅಬ್ದುಲ್ಲಾ ತಮ್ಮ ಎಕ್ಷ್​ ಖಾತೆಯಲ್ಲಿ ಬರೆದುಕೊಂಡಿದ್ದು ‘ರಾಜೌರಿಯಿಂದ ಆಘಾತಕಾರಿ ಸುದ್ದಿ ಬಂದಿದೆ. ನಾವು ಜಮ್ಮು-ಕಾಶ್ಮೀರದ ಆಡಳಿತ ಸೇವೆಗೆ ಸಮರ್ಪಿತ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು ಮತ್ತು ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:ಪಾಕ್‌ನಿಂದ ಶೆಲ್ ದಾಳಿ: ಸ್ಥಳಾಂತರಗೊಂಡ ಜನರೊಂದಿಗೆ ಕ್ರಿಕೆಟ್ ಆಡಿದ ಒಮರ್​ ಅಬ್ದುಲ್ಲಾ

ಇಂದು ಅಧಿಕಾರಿಯ ನಿವಾಸದ ಮೇಲೆ ಪಾಕ್ ಶೆಲ್ ದಾಳಿ ನಡೆದಿದ್ದು. ಈ ದಾಳಿಯಲ್ಲಿ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ಶ್ರೀ ರಾಜ್ ಕುಮಾರ್ ಥಾಪ್ಪಾ ಸಾವನ್ನಪ್ಪಿದರು. ಈ ಭೀಕರ ಜೀವಹಾನಿಯಿಂದ ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಮುಖ್ಯಮಂತ್ರಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES