ನಟ ಕಿಚ್ಚ ಸುದೀಪ್ ಆಪರೇಷನ್ ಸಿಂಧೂರ ಬೆಂಬಲಿಸಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು. ಇಡೀ ಕನ್ನಡ ಚಿತ್ರರಂಗ ನರೇಂದ್ರ ಮೋದಿಯವರ ಜೊತೆಗೆ ನಿಂತಿದೆ ಎಂಬ ಸಂದೇಶ ಕಳುಹಿಸಿದ್ದಾರೆ.
ಏನಿದೆ ಸುದೀಪ್ ಬರೆದ ಪತ್ರದಲ್ಲಿ..!
ನನ್ನ ತಾಯಿ ನಿಧನದ ಸಂತಾಪ ಪತ್ರಕ್ಕೆ ನಿಮಗೆ ಧನ್ಯವಾದ ಅರ್ಪಿಸುತ್ತೇನೆ. ಇಂದು ನಾನು ಕೇವಲ ಕೃತಜ್ಞತಾಪೂರ್ವಕ ಮಗನಾಗಿ ಅಲ್ಲದೇ ಹೆಮ್ಮೆಯ ಭಾರತೀಯನಾಗಿ ಪತ್ರ ಬರೆಯುತ್ತಿದ್ದೇನೆ. ಆಪರೇಷನ್ ಸಿಂಧೂರ ವಿಜಯೋತ್ಸವಕ್ಕೆ ನನ್ನ ಮೆಚ್ಚುಗೆ ಇದೆ. ಅದು ಕೇವಲ ಪ್ರತಿಕ್ರಿಯೆಯಾಗಿರಲಿಲ್ಲ. ಈ ಮೂಲಕ ಜಗತ್ತಿಗೆ ಒಂದು ದಿಟ್ಟ, ನಿರ್ಣಾಯಕ ಸಂದೇಶ.
ಇದನ್ನೂ ಓದಿ :ಲಕ್ನೋದಲ್ಲಿ ಬ್ರಹ್ಮೋಸ್ ಕ್ಷಿಪಣಿ ಉತ್ಪಾದನಾ ಘಟಕ; ವರ್ಷಕ್ಕೆ 80-100 ಕ್ಷಿಪಣಿಗಳ ಉತ್ಪಾದನೆ
ಭಾರತವು ಹಿಂಜರಿಯುವುದಿಲ್ಲ, ಭಾರತವು ಮರೆಯುವುದಿಲ್ಲ ಮತ್ತು ಭಾರತವು ಯಾವಾಗಲೂ ಮೇಲಿರುತ್ತದೆ. ಕೇವಲ ಪದಗಳಿಂದ ಮಾರ್ಗದರ್ಶನ ಮಾಡದೆ, ದೃಢ ನಿಶ್ಚಯದಿಂದ ಮಾರ್ಗದರ್ಶನ ಮಾಡುವ ನಾಯಕನನ್ನು ನಾವು ನೋಡುತ್ತಿದ್ದೇವೆ. ಪ್ರತಿಯೊಬ್ಬ ಕನ್ನಡಿಗ ಮತ್ತು ಇಡೀ ಕನ್ನಡ ಚಲನಚಿತ್ರೋದ್ಯಮವು ನಿಮ್ಮೊಂದಿಗೆ ದೃಢವಾಗಿ ನಿಂತಿದೆ. ನಿಮ್ಮ ಧೈರ್ಯದಿಂದ ಸ್ಫೂರ್ತಿ ಪಡೆಯುತ್ತೇವೆ. ನಿಮ್ಮ ನಾಯಕತ್ವದಲ್ಲಿ, ನಮ್ಮ ರಕ್ಷಣಾ ಪಡೆಗಳು ಅಪ್ರತಿಮ ನಿಖರತೆ, ಶಿಸ್ತು ಮತ್ತು ಶೌರ್ಯವನ್ನು ಪ್ರದರ್ಶಿಸಿವೆ. ಅವರ ಯಶಸ್ಸು ನಮ್ಮ ಹೆಮ್ಮೆ. ನಾವೆಲ್ಲರೂ ಒಂದೇ, ಧ್ವನಿಯೂ ಒಂದೇ, ಒಂದೇ ರಾಷ್ಟ್ರವಾಗಿ ಒಗ್ಗಟ್ಟಿನಿಂದ ನಿಂತಿದ್ದೇವೆ. ಪ್ರಧಾನಿ ಮೋದಿ ಅವರಿಗೆ ಕಿಚ್ಚ ಸುದೀಪ್ ಪತ್ರ ಬರೆದಿದ್ದಾರೆ.
ಉದ್ವಿಗ್ನತೆ ಸಂದರ್ಭದಲ್ಲಿ ದೇಶವನ್ನು ಉತ್ತಮ ನಾಯಕತ್ವದೊಂದಿಗೆ ಪ್ರಧಾನಿ ಮೋದಿ ಮುನ್ನಡೆಸುತ್ತಿದ್ದಾರೆಂಬ ಆಶಯವನ್ನು ಸುದೀಪ್ ವ್ಯಕ್ತಪಡಿಸಿದ್ದಾರೆ. ಭಾರತೀಯ ಸೇನೆಯ ಹೋರಾಟಕ್ಕೆ ನಟ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಇದನ್ನೂ ಓದಿ :ಗಡಿ ಕಾಯುವ ಯೋಧರಿಗೆ ಉಚಿತ ಟ್ಯಾಕ್ಸಿ ವ್ಯವಸ್ಥೆ; ಟ್ಯಾಕ್ಸಿ ಯೂನಿಯನ್ ಘೋಷಣೆ
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಪ್ರದೇಶದ ಉಗ್ರರ ನೆಲೆಗಳನ್ನು ಗುರಿಯಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯಿತು. ಇದರ ಬೆನ್ನಲ್ಲೇ ಉಭಯ ದೇಶಗಳ ನಡುವೆ ಉದ್ವಿಗ್ನತೆ ಮತ್ತಷ್ಟು ಬಿಗಡಾಯಿಸಿದೆ.