Sunday, May 11, 2025

ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿ: ಭಾರತ ಸ್ಪಷ್ಟನೆ

ಭಾರತ ಮತ್ತು ಅಮೆರಿಕಾದ ನಡುವೆ ಕದನ ವಿರಾಮ ಜಾರಿಯಾಗಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಲ್ಡ್​ ಟ್ರಂಪ್​ ತಮ್ಮ ಸಾಮಾಜಿಕ ಜಾಲತಾಣ ಎಕ್ಷ್​ನಲ್ಲಿ ಬರೆದುಕೊಂಡಿದ್ದು. ಈ ಕದನ ವಿರಾಮ ತಕ್ಷಣದಿಂದಲೇ ಜಾರಿಯಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ :ಯುದ್ದದ ಕಾರ್ಮೋಡ, ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಪತ್ರ ಬರೆದ ಸಂಗೀತ ಶೃಂಗೇರಿ

ಈ ಕುರಿತು ಡೊನಾಲ್ಡ್​ ಟ್ರಂಪ್​ ಟ್ವಿಟ್ ಮಾಡಿದ್ದು “ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಸುದೀರ್ಘ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನಗಳು ಸಂಪೂರ್ಣ ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿಮತ್ತೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು. ಈ ವಿಷಯದ ಬಗ್ಗೆ ನಿಮ್ಮ ಗಮನಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಜೆ.ಡಿ ವ್ಯಾನ್ಸ್ ಕೂಡ ಟ್ವಿಟ್ ಮಾಡಿದ್ದು.

“ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಮತ್ತು ಶೆಹಬಾಜ್ ಷರೀಫ್, ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್, ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಮತ್ತು ಅಸಿಮ್ ಮಲಿಕ್ ಸೇರಿದಂತೆ ಹಿರಿಯ ಭಾರತ ಮತ್ತು ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಜೆ.ಡಿ
ವ್ಯಾನ್ಸ್ ಮತ್ತು ನಾನು ಮಾತುಕತೆ ನಡೆಸಿದ್ದೇವೆ.

ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಮತ್ತು ತಟಸ್ಥ ಸ್ಥಳದಲ್ಲಿ
ವ್ಯಾಪಕವಾದ ವಿಷಯಗಳ ಕುರಿತು ಮಾತುಕತೆಗಳನ್ನು ಪ್ರಾರಂಭಿಸಲು ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಶಾಂತಿಯ ಮಾರ್ಗವನ್ನು ಆರಿಸಿಕೊಳ್ಳುವಲ್ಲಿ ಪ್ರಧಾನಿ ಮೋದಿ ಮತ್ತು ಷರೀಫ್ ಅವರ ಬುದ್ಧಿವಂತಿಕೆ, ವಿವೇಕ ಮತ್ತು ರಾಜತಾಂತ್ರಿಕತೆಯನ್ನು ನಾವು ಶ್ಲಾಘಿಸುತ್ತೇವೆ” ಎಂದು ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES