Sunday, May 11, 2025

ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿ: ಭಾರತ ಸ್ಪಷ್ಟನೆ

ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಜಾರಿಯಾಗಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಶ್ರಿ ಸ್ಪಷ್ಟ ಪಡಿಸಿದ್ದು. ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ. ಇನ್ನು ಇದರ ಕುರಿತು ಉಭಯ ದೇಶಗಳು ಮೇ.12 ರಂದು ಚರ್ಚಿಸಲಾಗುತ್ತದೆ ಎಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಇದನ್ನೂ ಓದಿ :ಭಾರತದ ಮೇಲೆ ನಡೆಯುವ ಉಗ್ರಕೃತ್ಯವನ್ನು ಯುದ್ದವೆಂದೇ ಪರಿಗಣಿಸುತ್ತೇವೆ: ದೃಡ ನಿರ್ಧಾರ ಕೈಗೊಂಡ ಭಾರತ

ಇನ್ನು ಈ ಕುರಿತು ಅಮೇರಿಕಾ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತಮ್ಮ ಸಾಮಾಜಿಕ ಜಾಲತಾಣ ಎಕ್ಷ್​ನಲ್ಲಿ ಬರೆದುಕೊಂಡಿದ್ದು. “ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಸುದೀರ್ಘ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನಗಳು ಸಂಪೂರ್ಣ ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿಮತ್ತೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು. ಈ ವಿಷಯದ ಬಗ್ಗೆ ನಿಮ್ಮ ಗಮನಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ವಿದೇಶಾಂಗ ಸಚಿವರ ಟ್ವಿಟ್​

ಕದನ ವಿರಾಮದ ಕುರಿತು ವಿದೇಶಾಂಗ ಸಚಿವ ಎಸ್​. ಜೈಶಂಕರ್​ ಟ್ವಿಟ್​ ಮಾಡಿದ್ದು.”ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ.
ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ನಿರಂತರವಾಗಿ ಕಾಯ್ದುಕೊಂಡಿದೆ. ಅದು ಹಾಗೆಯೇ ಮುಂದುವರಿಯುತ್ತದೆ” ಎಂದು ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES