ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯ್‌ಪುರ-ಬಲೋಡಾ ಬಜಾರ್ ರಸ್ತೆಯ, ಸರಗಾಂವ್ ಬಳಿ ಭಾನುವಾರ ತಡರಾತ್ರಿ ಟ್ರಕ್ ಮತ್ತು ಟ್ರೇಲರ್ ನಡುವೆ ಡಿಕ್ಕಿ ಸಂಭವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 11 ಜನರು ಗಾಯಗೊಂಡಿದ್ದು. ಅವರನ್ನು ಚಿಕಿತ್ಸೆಗೆ ಎಂದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯ ಪೊಲೀಸರ ಪ್ರಕಾರ “ಮೃತರೆಲ್ಲರೂ ಛತ್ತಿಸ್ಗಡ್ದ ಚಟೌಡ್ ಗ್ರಾಮದ ನಿವಾಸಿಗಳಾಗಿದ್ದು. ಇವರೆಲ್ಲರೂ ಹತ್ತಿರದ ಬನಸಾರಿಯಾ ಗ್ರಾಮದಲ್ಲಿ ನಡೆದ ಕುಟುಂಬ ಛಾತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು. ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಇವರ ಪ್ರಯಾಣಿಸುತ್ತಿದ್ದ ಟ್ರಕ್ ವೇಗವಾಗಿ ಬರುತ್ತಿದ್ದ ಟ್ರೇಲರ್ಗೆ ಡಿಕ್ಕಿಯಾಗಿದ್ದು. ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಅನೇಕರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ :Virat Kohli: ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ವಿದಾಯ
ಅಪಘಾತದ ಬಗ್ಗೆ ಮಾಹಿತಿ ಬಂದ ತಕ್ಷಣ, ಖರೋರಾ ಪೊಲೀಸ್ ಠಾಣೆ ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು. ಟ್ರಕ್ನಲ್ಲಿ ಪ್ರಯಾಣಿಸುತ್ತಿದ್ದ 25 ಜನರ ಪೈಕಿ 13 ಮಂದಿ ಸಾವನ್ನಪ್ಪಿದ್ದು, 12 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು. ಅತಿ ವೇಗ ಮತ್ತು ಅಜಾಗರೂಕ ಚಾಲನೆಯೆ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.