Monday, May 12, 2025

Virat Kohli: ಟೆಸ್ಟ್​ ಕ್ರಿಕೆಟ್​ಗೆ ಕಿಂಗ್​​ ಕೊಹ್ಲಿ ವಿದಾಯ

ರೋಹಿತ್​ ಶರ್ಮ ಬೆನ್ನಲ್ಲೇ ವಿರಾಟ್ ಕೊಹ್ಲಿ ಟೆಸ್ಟ್​ ಕ್ರಿಕೆಟ್​​ಗೆ ನಿವೃತ್ತಿ ಘೋಷಿಸಿದ್ದು. ಜೂನ್ 20 ರಿಂದ ಇಂಗ್ಲೆಂಡ್‌ನಲ್ಲಿ ಆರಂಭವಾಗಲಿರುವ ಐದು ಪಂದ್ಯಗಳ ಸರಣಿಗೆ ಮುಂಚಿತವಾಗಿ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದಾರೆ.

ಕೆಲದಿನಗಳ ಹಿಂದೆಯೇ ಹಿಟ್​ಮ್ಯಾನ್​ ರೋಹಿತ್​ ಶರ್ಮ ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದರ ನಡುವೆ ವಿರಾಟ್ ಕೊಹ್ಲಿ ಕೂಡ ಟೆಸ್ಟ್​ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಇದೀಗ ವಿರಾಟ್​ ಅಧಿಕೃತವಾಗಿ ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ.

 

View this post on Instagram

 

A post shared by Virat Kohli (@virat.kohli)

ಇದನ್ನೂ ಓದಿ :ಬೀದಿ ನಾಯಿ ದಾಳಿಗೆ 53 ವರ್ಷದ ಮಹಿಳೆ ಸಾ*ವು: ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ

ಕಳೆದ 14 ವರ್ಷಗಳ ಟೆಸ್ಟ್​ ಕ್ರಿಕೆಟ್​ ಜೀವನಕ್ಕೆ ವಿರಾಟ್​ ಕೊಹ್ಲಿ ನಿವೃತ್ತಿ ಘೋಷಿಸಿದ್ದು. ಅವರು 12 ಟೆಸ್ಟ್​  ಪಂದ್ಯಗಳನ್ನ ಆಡಿದ್ದು, ಇದರಲ್ಲಿ ಸರಾಸರಿ 46.85 ಸರಾಸರಿಯಲ್ಲಿ 9230 ರನ್​ಗಳಿಸಿದ್ದಾರೆ.ಕಳೆದ ವರ್ಷ ಟಿ-20 ವಿಶ್ವಕಪ್​ ಗೆಲ್ಲುತ್ತಿದ್ದಂತೆ ಟಿ20 ಕ್ರಿಕೆಟ್‌ಗೆ ಕೊಹ್ಲಿ ವಿದಾಯ ಘೋಷಿಸಿದ್ದರು. ಎ+ ಶ್ರೇಣಿ ಆಟಗಾರನಾಗಿರುವ ಕೊಹ್ಲಿ ಇನ್ನೂ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಮುಂದುವರಿಯಲಿದ್ದಾರೆ.

ವಿರಾಟ್​ ಕೊಹ್ಲಿ ಪತ್ರದಲ್ಲಿ ಏನಿದೆ..!

ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಬ್ಯಾಗಿ ಬ್ಲೂ ಕ್ಯಾಪ್ ಧರಿಸಿ 14 ವರ್ಷಗಳು ಕಳೆದಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸ್ವರೂಪವು ನನ್ನನ್ನು ಈ ಪ್ರಯಾಣಕ್ಕೆ ಕರೆದೊಯ್ಯುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಇದು ನನ್ನನ್ನು ಪರೀಕ್ಷಿಸಿದೆ, ನನ್ನನ್ನು ರೂಪಿಸಿದೆ ಮತ್ತು ನಾನು ಜೀವನಪರ್ಯಂತ ಸಾಗಿಸುವ ಪಾಠಗಳನ್ನು ಕಲಿಸಿದೆ.

ಇದನ್ನೂ ಓದಿ :ಪಾಕಿಸ್ತಾನದ ಪರ ಪೋಸ್ಟ್​ ಹಾಕಿದ್ದಾನೆಂದು ಎಗ್​ರೈಸ್​ ಅಂಗಡಿಗೆ ಬೆಂಕಿ ಇಟ್ಟ ಯುವಕರು

ಬಿಳಿಯ ಉಡುಪಿನಲ್ಲಿ ಆಡುವುದರಲ್ಲಿ ಆಳವಾದ ವೈಯಕ್ತಿಕ ಅಂಶವಿದೆ. ಶಾಂತವಾದ ಜಂಜಾಟ, ದೀರ್ಘ ದಿನಗಳು, ಯಾರೂ ನೋಡದ ಸಣ್ಣ ಕ್ಷಣಗಳು. ಇವೆಲ್ಲವೂ ನಿಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತವೆ. ನಾನು ಈ ಸ್ವರೂಪದಿಂದ ದೂರ ಸರಿಯುತ್ತಿರುವುದು ಸುಲಭದ ನಿರ್ಧಾರವಲ್ಲ. ಆದರೆ ಇದುವೇ ಸರಿ ಎಂದು ಅನಿಸುತ್ತದೆ.

ನಾನು ಹೊಂದಿದ್ದ ಎಲ್ಲವನ್ನೂ ಟೆಸ್ಟ್​ ಕ್ರಿಕೆಟ್​ಗೆ ನೀಡಿದ್ದೇನೆ. ಅಲ್ಲದೆ ನಾನು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನದನ್ನು ಅದರಿಂದ ನನಗೆ ದಕ್ಕಿದೆ. ನನ್ನೊಂದಿಗೆ ಆಡಿದ ಪ್ರತಿಯೊಬ್ಬರಿಗೂ ಕೃತಜ್ಣತೆ ಅರ್ಪಿಸುತ್ತೇನೆ. ಅಲ್ಲದೆ ಯಾವತ್ತಿದ್ದರೂ ನಾನು ನನ್ನ ಟೆಸ್ಟ್ ವೃತ್ತಿಜೀವನವನ್ನು ನಗುವಿನೊಂದಿಗೆ ಹಿಂತಿರುಗಿ ನೋಡುತ್ತೇನೆ #269, ಸೈನ್ ಆಫ್. ಎಂದು ವಿರಾಟ್ ಕೊಹ್ಲಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ನಿವೃತ್ತಿ ಘೋಷಿಸಿದ್ದಾರೆ.

RELATED ARTICLES

Related Articles

TRENDING ARTICLES