ದೆಹಲಿ : ಆಪರೇಷನ್ ಸಿಂಧೂರದ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ರಾಷ್ಟ್ರವನ್ನ ಉದ್ದೇಶಿಸಿ ಇಂದು ಮಾತನಾಡಲಿದ್ದು. ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.
ಪಹಲ್ಗಾಮ್ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕಾರ್ಯಚರಣೆ ನಡೆಸಿದ್ದು. ಈ ಕಾರ್ಯಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಎರಡು ದೇಶಗಳ ನಡುವೆ ಉದ್ವಿಘ್ನತೆ ಸೃಷ್ಟಿಯಾಗಿದೆ. ಇದರ ನಡುವೆ ಎರಡು ರಾಷ್ಟ್ರಗಳ ನಡುವೆ ಕದನ ವಿರಾಮ ಏರ್ಪಟ್ಟಿದ್ದು, ಗೊಂದಲಮಯ ವಾತವರಣ ಸೃಷ್ಟಿಯಾಗಿದೆ. ಇವೆಲ್ಲದರ ನಡುವೆ ಪ್ರಧಾನಿ ಮೋದಿ ಭಾಷಣ ಕುತುಹಲ ಕೆರಳಿಸಿದೆ.
ಇದನ್ನೂ ಓದಿ :
ಸಾಮಾನ್ಯವಾಗಿ ಪ್ರಧಾನಿ ಮೋದಿ ರಾತ್ರಿ 8 ಗಂಟೆ ಸಮಯದಲ್ಲಿ ರಾಷ್ಟ್ರವನ್ನ ಉದ್ದೇಶಿ ಮಾತನಾಡಿದ ಸಂದರ್ಭಗಳಲ್ಲಿ ಸಾಕಷ್ಟು ಗಟ್ಟಿ ನಿರ್ಧಾರಗಳನ್ನ ಕೈಗೊಂಡಿದ್ದಾರೆ. ನೋಟ್ ಬ್ಯಾನ್, ಜಿಎಸ್ಟಿ, ಕೊರೊನೊ ಲಾಕ್ಡೌನ್ ಸೇರಿದಂತೆ ಅನೇಕ ನಿರ್ಧಾರಗಳನ್ನ ಪ್ರಧಾನಿ ಮೋದಿ ರಾತ್ರಿ ಸಮಯದಲ್ಲೇ ರಾಷ್ಟ್ರಕ್ಕೆ ತಿಳಿಸಿದ್ದು. ಈ ಬಾರಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ..? ಏನು ಮಾತನಾಡುತ್ತಾರೆ ಎಂಬುದು ಕುತುಹಲ ಕೆರಳಿಸಿದೆ.