Sunday, May 18, 2025

ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡುತ್ತಿದ್ದ ಹರಿಯಾಣದ ವಿದ್ಯಾರ್ಥಿ ಬಂಧನ

ಹರಿಯಾಣ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಹರಿಯಾಣದಲ್ಲಿ ಬಂಧಿಸಿದ್ದು. ಈತ ಭಾರತೀಯ ಸೇನಾ ಪಡೆಯ ಪೋಟೊ ಮತ್ತು ವಿಡಿಯೋಗಳನ್ನು ಗೌಪ್ಯವಾಗಿ ಕ್ಲಿಕ್ಕಿಸಿಕೊಂಡು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಬಂಧಿತ ವಿದ್ಯಾರ್ಥಿಯನ್ನು ದೇವೇಂದ್ರ ಸಿಂಗ್​ ಧಿಲ್ಲೋನ್​ ಎಂದು ಗುರುತಿಸಲಾಗಿದೆ.

ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ ವಿದ್ಯಾರ್ಥಿ ದೇವೇಂದ್ರ ಸಿಂಗ್​ ಧಿಲ್ಲೋನಿ ಭಾರತೀಯ ಸೇನಾ ಶಿಬಿರಗಳು ಮತ್ತು ಸೂಕ್ಷ್ಮ ಸ್ಥಳಗಳ ಛಾಯಾಚಿತ್ರ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದ. ಖಚಿತ ಮಾಹಿತಿ ಪ್ರಕಾರ ಕಾರ್ಯಚರಣೆ ನಡೆಸಿದ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ :ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡುತ್ತಿದ್ದ ದೇಶದ್ರೋಹಿ ಯುಟ್ಯೂಬರ್ ಬಂಧನ

ಸೋಷಿಯಲ್​ ಮಿಡಿಯೋ ಬಳಕೆಯಿಂದ ಸಿಕ್ಕಿಬಿದ್ದ ಕಳ್ಳ..!

ಇನ್ನು ಆರೋಪಿ ದೇವೇಂದ್ರ ಶಸ್ತ್ರಾಸ್ತ್ರಗಳ ಪರವಾನಗಿ ಇಲ್ಲದಿದ್ದರೂ ಪಿಸ್ತೂಲ್ ಮತ್ತು ಬಂದೂಕುಗಳೊಂದಿಗೆ ತನ್ನ ಭಾವಚಿತ್ರಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ. ಇದನ್ನು ಗಮನಿಸಿದ ಭದ್ರತಾ ಏಜೆಂಟ್ ಒಬ್ಬರು ಗುಹ್ಲಾ ಪೊಲೀಸ್ ಠಾಣೆಯಲ್ಲಿ ಮೇ 11 ರಂದು ಈ ಬಗ್ಗೆ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ, ಪೊಲೀಸರು ಮೇ 13 ರಂದು ದೇವೇಂದ್ರನನ್ನು ಬಂಧಿಸಿ ಎರಡು ದಿನಗಳ ಕಸ್ಟಡಿಗೆ ಪಡೆದು ವಿಚಾರಣೆ ಆರಂಭಿಸಿದ್ದರು. ಇದನ್ನೂ ಓದಿ :ತಿರುಪತಿಗೆ ಭೇಟಿ ಕೊಟ್ಟ ಇಸ್ರೋ ಅಧ್ಯಕ್ಷ ವಿ. ನಾರಾಯಣ

ವಿಚಾರಣೆ ವೇಳೆ ಆತನ ಮೊಬೈಲ್ ಫೋನ್‌ನಿಂದ ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಪುರಾವೆಗಳು ಪತ್ತೆಯಾಗಿದ್ದವು. ಈ ವಿಚಾರ ಗೊತ್ತಾಗುತ್ತಿದ್ದಂತೆ ಸೈಬರ್ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಹೊಸ ಪ್ರಕರಣ ದಾಖಲಾಗಿದ್ದು, ಮೂರು ದಿನ ದೇವೇಂದ್ರನನ್ನು ಹೆಚ್ಚುವರಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಜೊತೆಗೆ ಆರೋಪಿ ದೇವೇಂದ್ರನ ಬ್ಯಾಂಕ್ ಖಾತೆಗಳ ವಿವರ ಹಾಗೂ ಆತನ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡು ವಿಧಿ ವಿಜ್ಞಾನ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಕೈಥಾಲ್ ಪೊಲೀಸ್ ವರಿಷ್ಠಾಧಿಕಾರಿ ಆಸ್ತಾ ಮೋದಿ ತಿಳಿಸಿದ್ದಾರೆ.

ಇದನ್ನೂ ಓದಿ :‘ದೇಶದ ಯೋಧರು ಮೋದಿ ಕಾಲಿಗೆ ನಮಸ್ಕರಿಸುತ್ತಾರೆ’: ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಸಚಿವ

ಈತ 2024ರ ನವೆಂಬರ್​ನಲ್ಲಿ ಪಾಕಿಸ್ತಾನದ ಕರ್ತಾರ್‌ಪುರ ಕಾರಿಡಾರ್ ಮೂಲಕ ನಂಕಾನಾ ಸಾಹಿಬ್ ಯಾತ್ರೆಯನ್ನು ಕೈಗೊಂಡಿದ್ದ. ಈ ವೇಳೆ ಆಕಸ್ಮಿಕವಾಗಿ ಸಿಕ್ಕ ಅಪರಿಚಿತ ವ್ಯಕ್ತಿಯೊಬ್ಬ ಹಣದ ಆಮಿಷವೊಡ್ಡಿ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ಮಾಡುವಂತೆ ತಿಳಿಸಿದ್ದ. ಈ ಆಮಿಷದಂತೆ ಈತ ಪಾಕಿಸ್ತಾನಕ್ಕೆ ತೆರಳಿದ್ದ. ಈ ವೇಳೆ ಪಾಕಿಸ್ತಾನಿ ಏಜೆಂಟ್‌ಗಳು ಹುಡುಗಿಯ ಮೂಲಕ ದೇವೇಂದ್ರನನ್ನು ಹನಿಟ್ರ್ಯಾಪ್ ಮಾಡಿದ್ದರು. ಅಲ್ಲದೇ ಇದೇ ಹುಡುಗಿಯ ಮೂಲಕ ದೇವೇಂದ್ರ ಪಾಕಿಸ್ತಾನಿ ಗುಪ್ತಚರ ಸಂಸ್ಥೆಯೊಂದಿಗೆ ಸಂಪರ್ಕ ಕೂಡ ಸಾಧಿಸಿದ್ದ.

ನಂತರ ಭಾರತಕ್ಕೆ ಹಿಂತಿರುಗಿದ್ದ ದೇವೇಂದ್ರ ಪಾಕಿಸ್ತಾನಿ ಏಜೆಂಟ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ. ಹರಿಯಾಣದಲ್ಲಿನ ಮಿಲಿಟರಿ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುತ್ತಲೇ ಇದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES