ನಟ ದರ್ಶನ್ ಮತ್ತು ವಿಜಯಲಕ್ಷ್ಮೀ 22ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದು. ನಟ ದರ್ಶನ್ ತಮ್ಮ ಪತ್ನಿಯೊಂದಿಗೆ “ಮುದ್ದು ಮುದ್ದು ರಾಕ್ಷಸಿ” ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿ ಸಂಭ್ರಮಿಸಿದ್ದಾರೆ.
ನಟ ದರ್ಶನ್ 2003 ಮೇ 19ರಂದು ವಿಜಯಲಕ್ಷ್ಮೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಧರ್ಮಸ್ಥಳದ ವಸಂತ್ ಮಹಲ್‌ನಲ್ಲಿ ಮದುವೆಯಾಗಿದ್ದ ಈ ಜೋಡಿ ಇದೀಗ 22 ವರ್ಷದ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ದರ್ಶನ್ ಹಾಗೂ ವಿಜಯಲಕ್ಷ್ಮೀ ದಂಪತಿ ಇಂಡೋನೇಷಿಯಾದ ಬಾಲಿಯಲ್ಲಿ 22ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಕೇಕ್ ಕತ್ತರಿಸುವ ಮೂಲಕ ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಇದನ್ನೂ ಓದಿ :ಮಹಾ ಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳೆ ಸಾ*ವು
ಈ ವಿಶೇಷವಾದ ಸಂದರ್ಭದಲ್ಲಿ ಪತ್ನಿಗಾಗಿ ನಟ ದರ್ಶನ್ ಹಿಂದಿ ಹಾಡು ಹಾಡಿದ್ದಾರೆ. ಅಷ್ಟೇ ಅಲ್ಲದೇ ಪತ್ನಿ ವಿಜಯಲಕ್ಷ್ಮೀ ಜೊತೆ ನಟ ದರ್ಶನ್ ಅವರ ಫೇವರಿಟ್ ಮುದ್ದು ರಾಕ್ಷಸಿ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ನಟ ಚಿಕ್ಕಣ್ಣ ಸೇರಿದಂತೆ ಆಪ್ತ ಬಳಗದ ಜೊತೆ ವೆಡ್ಡಿಂಗ್ ಆನಿವರ್ಸರಿ ಆಚರಿಸಿಕೊಂಡಿದ್ದಾರೆ. ಇದನ್ನೂ ಓದಿ :ದರ್ಶನ್ ದಾಂಪತ್ಯಕ್ಕೆ ಜೀವನಕ್ಕೆ 22ನೇ ವರ್ಷದ ಸಂಭ್ರಮ: ಅಣ್ಣ-ಅತ್ತಿಗೆಗೆ ವಿಶ್ ಮಾಡಿದ ಫ್ಯಾನ್ಸ್
ಕಳೆದ ವರ್ಷ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀ ದಂಪತಿ ದುಬೈನಲ್ಲಿ ಬಹಳ ಅದ್ಧುರಿಯಾಗಿ ತಮ್ಮ 21ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಇದೀಗ ಆಪ್ತರು ಹಾಗೂ ಪತ್ನಿ ಜೊತೆ ಬಾಲಿಯಲ್ಲಿ ಪಾರ್ಟಿ ಮೂಡ್ನಲ್ಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್.