Thursday, May 22, 2025

ರಾಹುಲ್​-ಸೋನಿಯಾಗೆ ED ಶಾಕ್​: 142 ಕೋಟಿ ರೂಪಾಯಿ ಅಕ್ರಮ ಲಾಭ ಪಡೆದಿರುವ ಆರೋಪ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಇಡಿ ದೊಡ್ಡ ಆರೋಪ ಮಾಡಿದೆ. ಇಬ್ಬರೂ 142 ಕೋಟಿ ರೂಪಾಯಿ ಮೌಲ್ಯದ ಅಪರಾಧ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ಇಡಿ ನ್ಯಾಯಾಲಯಕ್ಕೆ ತಿಳಿಸಿದೆ.

2012ರಲ್ಲಿ ಬಿಜೆಪಿ ನಾಯಕ ಮತ್ತು ವಕೀಲ ಸುಬ್ರಮಣಿಯನ್ ಸ್ವಾಮಿ ಅವರು ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿರುವ ಇಡಿ ‘ರಾಹುಲ್​​ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಲಾಗಿದೆದೆ ಎಂದು ದೆಹಲಿಯ ರೋಸ್​ ಅವೆನ್ಯೂ ನ್ಯಾಯಾಲಯಕ್ಕೆ ತಿಳಿಸಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಇಡಿ ನ್ಯಾಯಾಲಯಕ್ಕೆ ಕೆಲವು ವಿಚಾರಗಳನ್ನು ತಿಳಿಸಿದ್ದು, ಈ ಹಗರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು 142 ಕೋಟಿ ರೂ. ಮೌಲ್ಯದ ಲಾಭ ಪಡೆದಿದ್ದಾರೆ ಎಂದು ಹೇಳಿದೆ. ಇದನ್ನೂ ಓದಿ :ಪವನ್​ ಕಲ್ಯಾಣ್​ಗೆ ರಾಜ್ಯದ 5 ಕುಮ್ಕಿ ಆನೆಗಳನ್ನ ಹಸ್ತಾಂತರಿಸಿದ ಕರ್ನಾಟಕ ಸರ್ಕಾರ

ಇಡಿ ಪರವಾಗಿ ವಾದ ಮಾಡಿದ ಸಾಲಿಸಿಟರ್ ಜನರಲ್​ ಎಸ್.ವಿ ರಾಜು “ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಆಸ್ತಿಗಳನ್ನು ನವೆಂಬರ್ 2023 ರಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅಲ್ಲಿಯವರೆಗೆ ಅವರು ಆ ಹಣವನ್ನು ಆನಂದಿಸುತ್ತಿದ್ದರು ಎಂದು ಹೇಳಲಾಗಿದೆ. ಇದನ್ನೂ ಓದಿ :ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡುವ ಸಿಎಂ-ಡಿಸಿಎಂಗೆ ರೆಡ್​ ಕಾರ್ಪೆಟ್​ ಸ್ವಾಗತ: ಸ್ಥಳೀಯರಿಂದ ಆಕ್ರೋಶ

ಜೂನ್ 26, 2014 ರಂದು ಬಿಜೆಪಿ ನಾಯಕ ಸುಬ್ರಮಣ್ಯ ಸ್ವಾಮಿ ಸಲ್ಲಿಸಿದ್ದ ಖಾಸಗಿ ದೂರನ್ನು ಮ್ಯಾಜಿಸ್ಟೀರಿಯಲ್ ನ್ಯಾಯಾಲಯವು ಗಮನಕ್ಕೆ ತೆಗೆದುಕೊಂಡ ನಂತರ ಇಡಿ 2021 ರಲ್ಲಿ ತನ್ನ ತನಿಖೆಯನ್ನು ಪ್ರಾರಂಭಿಸಿತು. ಸಂಸ್ಥೆಯು ಇತ್ತೀಚೆಗೆ ತನ್ನ ಆರೋಪಪಟ್ಟಿಯನ್ನು ಸಲ್ಲಿಸಿತ್ತು.

RELATED ARTICLES

Related Articles

TRENDING ARTICLES