Thursday, May 22, 2025

ಮಿಲ್ಕಿ ಬ್ಯೂಟಿಗೆ ಮೈಸೂರ್ ಸ್ಯಾಂಡಲ್ ಸೋಪ್ ರಾಯಭಾರಿ ಪಟ್ಟ: ಬರೋಬ್ಬರಿ 6.2 ಕೋಟಿ ಸಂಭಾವನೆ

ಬೆಂಗಳೂರು : ಕರ್ನಾಟಕದ ಹೆಮ್ಮೆಯ ಮೈಸೂರು ಸ್ಯಾಂಡಲ್​ ಸೋಪ್​ಗೆ ತೆಲಗು ನಟಿ ತಮ್ಮನ್ನಾ ಭಾಟಿಯಾ ರಾಯಭಾರಿಯಾಗಿದ್ದಾರೆ. ಸುಮಾರು 6.2 ಕೋಟಿ ವೆಚ್ಚದಲ್ಲಿ ಕರ್ನಾಟಕ ಸರ್ಕಾರ ತಮನ್ನಾ ಭಾಟಿಯ ಅವರನ್ನು 2 ವರ್ಷದ ಅವಧಿಗೆ ರಾಯಭಾರಿಯಾಗಿ ನೇಮಿಸಿಕೊಂಡಿದೆ.

ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿಯಾಗಿರುವ ತಮ್ಮನ್ನಾ ಭಾಟಿಯಾ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧಿಕೃತ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. 2 ವರ್ಷ 2 ದಿನದ ಅವಧಿಗೆ ರಾಯಭಾರಿಯಾಗಲು ನಟಿ ಬರೋಬ್ಬರಿ 6.20 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಇದನ್ನೂ ಓದಿ :ಸಿಂಧೂರ ಅಳಿಸಲು ಬಂದವರು ಮಣ್ಣಲ್ಲಿ ಮಣ್ಣಾಗಿದ್ದಾರೆ: ನರೇಂದ್ರ ಮೋದಿ

ಈ ಸಂಬಂಧ ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ನೇಮಕ ಮಾಡಿಕೊಳ್ಳಲಾಗಿದೆ. ಇದರ ನಡುವೆ ರಾಜ್ಯ ಸರ್ಕಾರಕ್ಕೆ ಕನ್ನಡದ ನಟಿಯರು ಬೇಕಿಲ್ವಾ ಎಂಬ ಪ್ರಶ್ನೆ ಉದ್ಬವವಾಗಿದೆ.

RELATED ARTICLES

Related Articles

TRENDING ARTICLES