Saturday, May 24, 2025

ಕೋವಿಡ್​ ಹೆಚ್ಚಳ: ಜನರ ಅಹವಾಲು ಸ್ವೀಕರಿಸಲು ಮಾಸ್ಕ್​ ಧರಿಸಿ ಬಂದ CM

ಮೈಸೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ ಹಿನ್ನಲೆ ಸಿಎಂ ಸಿದ್ದರಾಮಯ್ಯ ಮಾಸ್ಕ್​ ಧರಿಸಿ ಜನರ ಅಹವಾಲು ಸ್ವೀಕರಿಸಿದ್ದು. ಮುನ್ನೆಚ್ಚರಿಕ ಕ್ರಮವಾಗಿ ಸಿಎಂ ಸಿದ್ದರಾಮಯ್ಯ ಮಾಸ್ಕ್​ ಧರಿಸಿ ಜನತಾ ದರ್ಶನದಲ್ಲಿ ಹಾಜರಾಗಿದ್ದಾರೆ.

ಸಿಂಗಾಪುರ, ಹಾಂಕಾಂಗ್‌ನಲ್ಲಿ ತಲ್ಲಣ ಎಬ್ಬಿಸಿರುವ ಕೊರೊನಾ ಹೊಸ ತಳಿ ಈಗ ಕರ್ನಾಟಕದಲ್ಲಿ ನಿಧಾನಕೆ ಏರುಗತಿಯಲ್ಲಿ ಸಾಗುತ್ತಿದೆ. ಮೇ ತಿಂಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಜನವರಿಯಲ್ಲಿ ಮೂರು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಫೆಬ್ರವರಿಯಲ್ಲಿ ಕೇವಲ 1 ಕೇಸ್‌ ಪತ್ತೆಯಾಗಿತ್ತು. ಮಾರ್ಚ್‌ನಲ್ಲೂ ಮೂರು, ಏಪ್ರಿಲ್‌ ತಿಂಗಳಲ್ಲೂ ಕೇವಲ 3 ಕೇಸ್‌ಗಳು ದಾಖಲಾಗಿದ್ದವು. ಆದರೆ, ಮೇ ತಿಂಗಳು ಇನ್ನೂ ಮುಗಿದಿಲ್ಲ, ಆಗಲೇ 33 ಪ್ರಕರಣಗಳು ಪತ್ತೆಯಾಗಿವೆ. ಇದನ್ನೂ ಓದಿ :ಮನೆಗೆ ಬಿಡುವುದಾಗಿ ಹೇಳಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಕಾಮುಕ ಸ್ವಾಮೀಜಿ ಅಂದರ್​

ಇದರಿಂದ ಎಚ್ಚೆತ್ತಿರುವ ರಾಜ್ಯ ಆರೋಗ್ಯ ಇಲಾಖೆ ಕೋವಿಡ್​ ಟೆಸ್ಟ್ ಹೆಚ್ಚಿಸಲು ಮುಂದಾಗಿದ್ದು. ನಾಳೆಯಿಂದ ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಆರಂಭವಾಗಲಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ನಡೆದ ಜನತಾ ದರ್ಶನಕ್ಕೆ ಮಾಸ್ಕ್​ ಧರಿಸಿ ಆಗಮಿಸಿದ್ದು. ಜನರ ಬಳಿ ಖುದ್ದಾಗಿ ತೆರಳಿ ಅಹವಾಲು ಸ್ವೀಕರಿಸಿದ್ದಾರೆ.
ಅಕ್ಕ-ಪಕ್ಕದ ರಾಜ್ಯದಲ್ಲಿ ಕೋವಿಡ್ ಹೆಚ್ಚಾದ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ :ರಾಜ್ಯದಲ್ಲಿ ಕೋವಿಡ್​ ಪ್ರಕರಣಗಳ ಸ್ಪೋಟ; ರಾಜ್ಯದಲ್ಲಿ ಕೋವಿಡ್​ ಟೆಸ್ಟ್​ ಆರಂಭಿಸಲು ಸೂಚನೆ

ಈಗಾಗಲೇ ಆಂದ್ರಪ್ರದೇಶ ಮತ್ತು ಕೇರಳ ಸರ್ಕಾರಗಳು ತಮ್ಮ ರಾಜ್ಯದಲ್ಲಿ ಮಾಸ್ಕ್​ ಧರಿಸುವುದು ಕಡ್ಡಾಯಗೊಳಿಸಿದ್ದು. ಕರ್ನಾಟಕ ಸರ್ಕಾರ ಕೂಡ ಕೂಡಲೆ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಸದ್ಯ ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 257ಕ್ಕೆ ಏರಿಕೆ ಆಗಿದ್ದು. ಈ ಪೈಕಿ ಬಹುತೇಕ ಎಲ್ಲಾ ಪ್ರಕರಣಗಳು ಸೌಮ್ಯ ಲಕ್ಷಣ ಹೊಂದಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

RELATED ARTICLES

Related Articles

TRENDING ARTICLES