Monday, October 28, 2024

`ಸರ್ಕಾರ ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದೆ ‘ : ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ  ಸಿದ್ದರಾಮಯ್ಯ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿರೋದು ಸಿದ್ದರಾಮಯ್ಯ ಆಕ್ರೋಶಕ್ಕೆ ಕಾರಣ.

ಪ್ರೆಸ್​ಮೀಟ್​ನಲ್ಲಿ ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ , ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಜ್ಯ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರಿದೆ. ರೈತರಿಗೆ ವರದಾನವಾಗಿದ್ದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ರೈತರಿಗೆ ಮರಣ ಶಾಸನ ಬರೆಯಲು ಸರ್ಕಾರ ಮುಂದಾಗಿದ್ದು, ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದ ಈ ದಿನ (ಜುಲೈ -13) ಕರ್ನಾಟಕದ ಪಾಲಿಗೆ ಕರಾಳ ದಿನ. ಕಾಯ್ದೆಗೆ ತಿದ್ದುಪಡಿ ತಂದಿರುವುದು ರೈತರು, ಕೂಲಿ ಕಾರ್ಮಿಕರು, ಹಿಂದುಳಿದವರ ವಿರೋಧಿಯಾಗಿದೆ. ವಿರೋಧದ ನಡುವೆಯೂ ಸುಗ್ರೀವಾಜ್ಞೆ ಹೊರಡಿಸೋ ಮೂಲಕ ಸರ್ಕಾರ ಸರ್ವಾಧಿಕಾರಿ ಧೋರಣೆ ಪ್ರದರ್ಶಿಸಿದೆ  ಅಂತ ಕಿಡಿಕಾರಿದ್ದಾರೆ.

ಕೊರೋನಾ ಸಂದರ್ಭದಲ್ಲಿ ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ  ಹೊರಡಿಸಲ್ಲ ಅಂತ ಅನ್ಕೊಂಡಿದ್ದೆ. ಆದ್ರೆ, ಸುಗ್ರೀವಾಜ್ಞೆ ಹೊರಡಿಸಿದೆ. ಈ ಮೂಲಕ ರೈತ ವಿರೋಧಿಯಾಗಿ ನಡೆದುಕೊಂಡಿದೆ ಅಂತ ಗರಂ ಆದರು.

RELATED ARTICLES

Related Articles

TRENDING ARTICLES