ಚಿಕ್ಕಮಗಳೂರು : 14 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಸೆರೆ ಹಿಡಿದಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪ ಮುಜೇಕಾನ್ ಗ್ರಾಮದಲ್ಲಿ ನಡೆದಿದೆ. ಮುಜೇಕಾನ್ ಗ್ರಾಮದಂಚಿನಲ್ಲಿರುವ ಅರಣ್ಯ ಪ್ರದೇಶದಲ್ಲಿ ಹೆಬ್ಬಾವು ಕಾಣಿಸಿಕೊಂಡಿತ್ತು, ಬೃಹತ್ ಗಾತ್ರದ ಹೆಬ್ಬಾವು ಕಂಡು ಸ್ಥಳೀಯರು ಭಯಗೊಂಡು ತಕ್ಷಣ ಅರಣ್ಯ ಇಲಾಖೆ ಹಾಗೂ ಉರಗ ತಜ್ಞರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಹಾಗೂ ಉರಗ ತಜ್ಞ ರಿಜ್ವಾನ್ ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೃಹತ್ ಗಾತ್ರದ ಹೆಬ್ಬಾವು ವನ್ನ ಸೆರೆ ಹಿಡಿದಿದ್ದಾರೆ. ನಂತರ ಸೆರೆ ಹಿಡಿದ ಹೆಬ್ಬಾವನ್ನ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಕುದುರೆಮುಖ ಅರಣ್ಯಕ್ಕೆ ಬಿಡಲಾಯ್ತು..
ಸಚಿನ್ ಶೆಟ್ಟಿ ಚಿಕ್ಕಮಗಳೂರು…