Thursday, January 16, 2025

ಕಾಂಗ್ರೆಸ್ ಯುವ ನಾಯಕ ಮಿಥುನ್ ರೈಗೆ ಕೊರೋನಾ ಪಾಸಿಟಿವ್..!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಗೂ ಕೊರೊನಾ ಸೋಂಕು ತಗುಲಿದೆ. ಈ ಕುರಿತು ತಮ್ಮ ಫೇಸ್ಬುಕ್ ಹಾಗೂ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕೊರೊನಾ ಸೋಂಕು ತಗುಲಿರುವುದನ್ನ ದೃಢಪಡಿಸಿದ್ದಾರೆ. ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಿಥುನ್ ರೈ ತನ್ನ ಪೋಸ್ಟ್ ನಲ್ಲಿ, ತನಗೆ ಕೊರೊನಾ ಪಾಸಿಟಿವ್ ಆಗಿದ್ದು, ಬೆಂಗಳೂರಿನಲ್ಲಿ ಕ್ಯಾರೆಂಟೈನ್ ನಲ್ಲಿದ್ದೇನೆ ಎಂದು ತಿಳಿಸಿದ್ದಾರೆ. ಅಲ್ಲದೇ, ಇತ್ತೀಚಿನ ಕೆಲ ದಿನಗಳಿಂದ ತನ್ನ ಜೊತೆ‌ ನಿಕಟ ಸಂಪರ್ಕ ಹೊಂದಿದ್ದವರು, ಕೋವಿಡ್ ಪರೀಕ್ಷೆಗೆ ಒಳಪಡುವಂತೆಯೂ‌ ಮನವಿ ಮಾಡಿದ್ದಾರೆ. ಮಿಥುನ್ ರೈ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

RELATED ARTICLES

Related Articles

TRENDING ARTICLES