ಉಡುಪಿ : ಇಂದು ಜಿಲ್ಲೆಯಲ್ಲಿ ಒಂದೇ ದಿನಕ್ಕೆ 281 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 2686 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು 34 ಕೊರೋನಾ ಪಾಸಿಟಿವ್ ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಇದುವರೆಗೆ ಜಿಲ್ಲೆಯಲ್ಲಿ 1765 ಮಂದಿ ಕೊರೋನಾ ಪಾಸಿಟಿವ್ ರೋಗಿಗಳು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 910 ಆಕ್ಟಿವ್ ಕೊರೋನಾ ಪಾಸಿಟಿವ್ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಐವರು ಸೊಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 11 ಜನರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.