Saturday, January 18, 2025

ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವು

ಚಿಕ್ಕಮಗಳೂರು : ಅಡಿಕೆ ತೋಟಕ್ಕೆ ಔಷಧಿ ಸಿಂಪಡಿಸಲು ಕಬ್ಬಿಣದ ಏಣಿಯನ್ನ ತೋಟದಲ್ಲಿ ಹೊತ್ತೊಯ್ಯುವಾಗ ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ದುಗ್ಗಲಮಕ್ಕಿ ಗ್ರಾಮದಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನ 28 ವರ್ಷದ ರಮೇಶ್ ಎಂದು ಗುರುತಿಸಲಾಗಿದೆ.

ದಶಕಗಳ ಹಿಂದೆ ಕಾಫಿ-ಅಡಕೆ ತೋಟಗಳಲ್ಲಿ ಮರಗಸಿ, ಮೆಣಸು ಕೊಯ್ಯಲು ಹಾಗೂ ಔಷಧಿ ಸಿಂಪಡಿಸಲು ಬಿದಿರಿನ ಏಣಿಗಳನ್ನ ಬಳಸುತ್ತಿದ್ದರು. ಆದರೆ, ಇತ್ತೀಚಿನ ವರ್ಷಗಳಲ್ಲಿ ಕಬ್ಬಿಣದ ಏಣಿ ಬಂದ ಬಳಿಕ ಬಿದಿರಿನ ಏಣಿಯನ್ನು ಬಳಸುವವರ ಸಂಖ್ಯೆ ತೀರಾ ಕಡಿಮೆಯಾಗಿತ್ತು. ತೋಟಗಳಲ್ಲಿ ಮರಗಸಿ, ಮೆಣಸು ಕೊಯ್ಯಲು ಹಾಗೂ ಔಷಧಿ ಸಿಂಪಡಣೆಗೆ ಕಬ್ಬಿಣದ ಏಣಿಗಳ ಬಳಕೆ ಕಾರ್ಯರೂಪಕ್ಕೆ ಬಂದ ಮೇಲೆ ಈ ರೀತಿಯಾಗಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕರು ಸಾವನ್ನಪ್ಪುವುದು ಸಾಮಾನ್ಯವಾಗಿತ್ತು. ಈ ರೀತಿ ವಿದ್ಯುತ್ ಸ್ಪರ್ಶದಿಂದ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಪ್ರಕರಣಗಳು ಸಾಮಾನ್ಯವಾಗಿದ್ದರಿಂದ ತೋಟದ ಮಾಲೀಕ ಕೃಷ್ಣೇಗೌಡ ಕಾರ್ಮಿಕರಿಗೆ ವಿಮೆ ಮಾಡಿಸಿದ್ದರು ಎಂದು ತಿಳಿದು ಬಂದಿದೆ. ಇದರಿಂದ ಕಾರ್ಮಿಕನ ಕುಟುಂಬಕ್ಕೂ ಪರಿಹಾರ ದೊರೆಯಲಿದೆ. ಕಳಸ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ನಡೆದಿದ್ದು, ಮೃತ ರಮೇಶ್ ತಾಯಿ ಕಳಸ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ..

ಸಚಿನ್ ಶೆಟ್ಟಿ ಚಿಕ್ಕಮಗಳೂರು…

RELATED ARTICLES

Related Articles

TRENDING ARTICLES