Saturday, January 18, 2025

ಯೂತ್ ಕಾಂಗ್ರೆಸ್ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ

ಚಿಕ್ಕಮಗಳೂರು : ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು. ಈ ವೇಳೆ ಮಹಾತ್ಮ ಗಾಂಧಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಕಾರ್ಗಿಲ್ ಯುದ್ಧದಲ್ಲಿ ಮಡಿದ ಸಾವಿರಾರು ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿ, ನಂತರ ಕಾರ್ಗಿಲ್ ಯುದ್ದದ ವಿಜಯೋತ್ಸವ ಆಚರಿಸಿ, ಕಾಂಗ್ರೆಸ್ ಕಾರ್ಯಕರ್ತರು ಒಬ್ಬರಿಗೊಬ್ಬರು ಸಿಹಿ ಹಂಚಿ ಸಂತೋಷಪಟ್ಟರು. ಇದೇ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಚಿಕ್ಕಮಗಳೂರಿನ ವೀರಯೋಧ ಕ್ಯಾಪ್ಟನ್ ಕೃಷ್ಣೇಗೌಡ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಸನ್ಮಾನಿಸಿ, ಗೌರವಿಸಿದರು. ಗೌರವ ಸ್ವೀಕರಿಸಿ ಮಾತನಾಡಿದ ಕ್ಯಾಪ್ಟನ್ ಕೃಷ್ಣೇಗೌಡ ಅವರು ಕಾರ್ಗಿಲ್ ಯುದ್ಧದ ಮಹತ್ವ ಹಾಗೂ ಯುದ್ಧದ ದಿನಗಳನ್ನು ಮೆಲುಕು ಹಾಕಿ, ದೇಶದ ಮಹತ್ವ ಹಾಗೂ ಯುದ್ಧದ ಸಂದರ್ಭದಲ್ಲಿ ಯೋಧರು ಮಾಡಿದಂತ ತ್ಯಾಗ-ಬಲಿದಾನ ಮತ್ತು ಅವರ ಕಾರ್ಯಾಚರಣೆಯ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರಿಗೆ ತಿಳಿಸಿದರು.ಈ ಕಾರ್ಗಿಲ್ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಹತ್ತಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು….

 

RELATED ARTICLES

Related Articles

TRENDING ARTICLES