Saturday, January 18, 2025

ಪಾಕ್ ಪರ ಘೋಷಣೆ ಪ್ರಕರಣ:ವಿದ್ಯಾರ್ಥಿಗಳು ಪ್ರಯಾಣದ ಅರ್ಜಿ ವಜಾ

ಹುಬ್ಬಳ್ಳಿ : ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು ತಮ್ಮ ಮೂಲ ಸ್ಥಳಕ್ಕೆ ಹೋಗಲು ಅರ್ಜಿ ಸಲ್ಲಿಸಿದ್ದು, ವಿದ್ಯಾರ್ಥಿಗಳ ಅರ್ಜಿಯನ್ನು ಹುಬ್ಬಳ್ಳಿಯ ಎರಡನೇ ಜೆಎಂಎಫ್ ಸಿ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.

ಫೆ 15ರಂದು ಕೆಎಲ್​​ಇ  ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿಗಳ ಜಾಮೀನಿಗೆ ಸಂಬಂಧಿಸಿದಂತೆ ಬೆಂಗಳೂರಿನ ವಕೀಲರ ತಂಡ ಕಾಶ್ಮೀರ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಿದ್ದರು.
ಅಲ್ಲದೇ ವಿದ್ಯಾರ್ಥಿಗಳಿಗೆ ಷರತ್ತು ಬದ್ದ ಜಾಮೀನಿನ ಮೇಲೆ ರಾಜ್ಯ ಬಿಟ್ಟು ತೆರಳದಂತೆ ನಿರ್ಬಂಧ ಹಾಕಿ ಬೆಂಗಳೂರಿನಲ್ಲಿರಲು ಅವಕಾಶ ಕಲ್ಪಿಸಲಾಗಿತ್ತು. ಈಗ ಬೆಂಗಳೂರಿನಿಂದ ಕಾಶ್ಮೀರಕ್ಕೆ ಹೋಗಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಿ ಎರಡನೇ ಜೆಎಂಎಫ್​​​​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

RELATED ARTICLES

Related Articles

TRENDING ARTICLES