ಹುಬ್ಬಳ್ಳಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ರು. ನಗರದ ತಹಶಿಲ್ದಾರ್ ಕಚೇರಿ ಎದುರುಗಡೆ ಎಐಟಿಯುಸಿ ಸಂಯೋಗದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಆಶಾ ಕಾರ್ಯಕರ್ತೆಯರು ತಮ್ಮ ಜೀವನ ಪಣವಾಗಿಟ್ಟು, ಕೋವಿಡ್ ವಿರುದ್ಧ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ದುಡಿತಕ್ಕೆ ತಕ್ಕ ಪ್ರತಿಫಲವಿಲ್ಲದೆ ಅನಿಶ್ಚಿತ ವೇತನದಿಂದ ಹೈರಾಣಾಗಿದ್ದು ಸರ್ಕಾರ ಕೂಡಲೇ ಗೌರವಧನ ಹಾಗೂ ಪ್ರೋತ್ಸಾಹ ಎರಡನ್ನೂ ಸೇರಿಸಿ ಮಾಸಿಕ ಕನಿಷ್ಠ 12,000 ವೇತನ ನೀಡಬೇಕೆಂದು ಒತ್ತಾಯಿಸಿದ್ರು. ಗೌರವಧನ ಹೆಚ್ಚಿಸುವ ವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿ ತಹಶಿಲ್ದಾರರ ಮುಖಾಂತರ ಮನವಿ ಸಲ್ಲಿಸಿದರು..