ಚಿತ್ರದುರ್ಗ : ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕುಟುಂಬದಂತೆ ಕಾರ್ಯನಿರ್ವಹಿಸಲು ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಸಹಕಾರ ನೀಡಬೇಕು ಎಂದು ನೂತನ ಜಿಲ್ಲಾಧಿಕಾರಿಗಳಾದ ಕವಿತಾ ಎಸ್. ಮಣ್ಣಿಕೇರಿ ಜಿಲ್ಲೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನೂತನ ಜಿಲ್ಲಾಧಿಕಾರಿಗಳ ಅಧಿಕಾರ ಸ್ವೀಕಾರ ಹಾಗೂ ನಿರ್ಗಮಿತ ಜಿಲ್ಲಾಧಿಕಾರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೋವಿಡ್-19 ಸೋಂಕು ಹರಡುವಿಕೆ ಮತ್ತು ತಡೆಗಟ್ಟುವಲ್ಲಿ ಜಿಲ್ಲೆಯ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಹಾಗಾಗಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳೂ ಕಡಿಮೆ ಸಂಖ್ಯೆಯಲ್ಲಿರುವುದು ಸಂತೋಷದ ಸಂಗತಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಾನು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿ ಕಾರ್ಯನಿರ್ವಹಿಸಿದ್ದೇನೆ. ಈಗ ಐತಿಹಾಸಿಕ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದೇನೆ. ಎಲ್ಲ ಇಲಾಖೆಯ ಅಧಿಕಾರಿಗಳು ಹಿಂದಿನ ಜಿಲ್ಲಾಧಿಕಾರಿಗಳಿಗೆ ನೀಡಿದ ಸಹಕಾರವನ್ನು ತಮಗೂ ಉತ್ತಮವಾಗಿ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಕವಿತಾ ಎಸ್. ಮಣ್ಣಿಕೇರಿ ಅಧಿಕಾರ ಸ್ವೀಕಾರ
TRENDING ARTICLES