ಹುಬ್ಬಳ್ಳಿ : ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ಧಾರವಾಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅವಳಿನಗರದಲ್ಲಿ 15 ಕಡೆಗಳಲ್ಲಿ rapid ಆ್ಯಂಟಿಜೆನ್ ಟೆಸ್ಟ್ ಮಾಡಲಾಗುತ್ತಿದೆ. ಕೋವಿಡ್ ತಪಾಸಣೆ ವಾಹನಗಳ ಮೂಲಕ ಕೊವೀಡ್ ತಪಾಸಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.
ನಗರದ ದುರ್ಗದಬೈಲ್ ನಲ್ಲಿ rapid ಆ್ಯಂಟಿಜೆನ್ ಟೆಸ್ಟ್ ಮಾಡುತ್ತಿದ್ದ ವೇಳೆ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಇಂದಿನಿಂದ ಚಾಲನೇ ನೀಡಲಾಗಿದ್ದು, ಉತ್ತಮವಾಗಿ ಪ್ರಾರಂಭಗೊಂಡಿದೆ. ಅಲ್ಲದೇ ಸಾರ್ವಜನಿಕ ಸ್ಪಂದನೆ ಕೂಡ ಉತ್ತಮ ರೀತಿಯಲ್ಲಿ ಸಿಕ್ಕಿದೆ ಎಂದರು.
ಜನದಟ್ಟಣೆಯ ಪ್ರದೇಶಗಳಲ್ಲಿ ತಪಾಸಣೆ ಕೈಗೊಳ್ಳಲಾಗಿದೆ. ಅವಳಿನಗರದ 15 ಕಡೆಗಳಲ್ಲಿ ತಪಾಸಣೆ ನಡೆಯುತ್ತಿದ್ದು, ಕೊರೋನಾ ವೈರಸ್ ನಿಯಂತ್ರಣಕ್ಕೆ ಬರುವವರೆಗೂ ತಪಾಸಣೆ ನಡೆಯುತ್ತದೆ. ಅಲ್ಲದೇ ದಿನಕ್ಕೆ 1000 ತಪಾಸಣೆ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.