ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಪಾದಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೋನಾ ಸೋಂಕನ್ನು ನಿಯಂತ್ರಣದ ಕಡೆಗೆ ಗಮನ ಕೊಡುವ ಬದಲು ಜನರ ದೃಷ್ಠಿಯನ್ನು ಬೇರೆ ಕಡೆಗೆ ಒಯ್ಯುತ್ತಾ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ದೂರಿದ್ದಾರೆ. ಕೊರೋನಾದ ಸಂದರ್ಭದಲ್ಲಿಯೇ ಸುಗ್ರೀವಾಜ್ಞೆಗಳ ಮೂಲಕ ಜನ ವಿರೋಧಿ ಕಾಯ್ದೆಗಳನ್ನು ಜಾರಿ ತರಲಾಗುತ್ತಿದೆ. ವಲಸೆ ಕಾರ್ಮಿಕರಿಗೆ ಯಾವ ಕ್ರಮವನ್ನು ತೆಗೆದುಕೊಂಡಿಲ್ಲ. ಇಡೀ ದೇಶದ ಆರ್ಥಿಕ ವ್ಯವಸ್ಥೆಯೇ ಕುಸಿದು ಬಿದ್ದಿದೆ.
ಈ ಎಲ್ಲಾ ವಿಷಯಗಳನ್ನು ಕಾಂಗ್ರೆಸ್ ಚರ್ಚಿಸಲಿದ್ದು, ಪ್ರಮುಖವಾಗಿ ಕೊರೋನಾ ಉಪಕರಣಗಳ ಖರೀದಿಯಲ್ಲಿ ಕೋಟ್ಯಾಂತರ ರೂ. ಹಗರಣವಾಗಿದೆ. ಈ ವಿಷಯವನ್ನು ಕೂಡ ಚರ್ಚಿಸಲಾಗುವುದು ಮತ್ತು ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಮೆಗ್ಗಾನ್ ಆಸ್ಪತ್ರೆಯ ದೋಷಗಳ ವಿರುದ್ಧ ಮತ್ತಷ್ಟು ಹೋರಾಟ ರೂಪಿಸಲಾಗುವುದು. ಕಲವೆಡೆ ಕೊರೋನಾ ರೋಗಿಗಳನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಕಾಂಗ್ರೆಸ್ ತನ್ನ ಹೋರಾಟ ಆರಂಭಿಸಿದ್ದು, ಈ ಹೋರಾಟ ತೀವ್ರಗೊಳಿಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.