ಹುಬ್ಬಳ್ಳಿ : ರೈತರಿಗೆ ಬೆಳೆ ವಿಮೆ ಹಾಗೂ ಅತಿವೃಷ್ಠಿಯಿಂದ ಮನೆ ಕಳೆದುಕೊಂಡ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ವತಿಯಿಂದ ನಗರದ ತಹಶಿಲ್ದಾರರ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಅವರು ಕಳೆದ ವರ್ಷದ ಅತಿವೃಷ್ಠಿಯಿಂದ ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳು ನಾಶವಾಗಿದ್ದವು, ಇದೇ ಸಂದರ್ಭದಲ್ಲಿ ವಿಮೆ ಕಂಪನಿಗಳು ವಿಮೆ ಕಟ್ಟಿಸಿಕೊಂಡಿದ್ದವು. ಆದರೆ ಸರಕಾರ ಹಾಗೂ ವಿಮೆ ಕಂಪನಿಗಳು ರೈತರಿಗೆ ಬೆಳೆ ವಿಮೆ ನೀಡದೆ ಬೆಜವಾಬ್ದಾರಿ ತೋರುತ್ತಿದ್ದಾರೆ. ಅಷ್ಟೇ ಅಲ್ಲದೇ ರಾಜ್ಯ ಸರಕಾರ ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡಲ್ಲ, ರೈತರಿಗೆ ಅನುಕೂಲವಾಗುವ ಯಾವುದೇ ಯೋಜನೆ ತರಲು ವಿಫಲವಾಗಿದೆ. ಕೂಡಲೆ ರಾಜ್ಯ ಸರಕಾರ ರೈತರಿಗೆ ಬೆಳೆ ವಿಮೆ ನೀಡಬೇಕು, ಮತ್ತು ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರರ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಮಾಡಿದರು.
ರೈತರಿಗೆ ಬೆಳೆ ವಿಮೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
TRENDING ARTICLES