ಚಿತ್ರದುರ್ಗ : ತಾಲ್ಲೂಕಿನ ತುರುವನೂರು ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಳಾಂತರವನ್ನು ಖಂಡಿಸಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಕಾಂಗ್ರೆಸ್ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಚಿತ್ರದುರ್ಗ ಡಿಸಿ ವೃತ್ತದಲ್ಲಿ ಪ್ರತಿಭಟನಾ ಧರಣಿ ನಡೆಸಿ, ತೀವ್ರ ವಿರೋಧವನ್ನ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಕಾಲೇಜು ಸ್ಥಳಾಂತರಗೊಂಡಿರುವ ಹಿನ್ನಲೆಯಲ್ಲಿ, ಸ್ಥಳಾಂತರವನ್ನ ವಿರೋಧಸಿ ಶಾಸಕ ರಘುಮೂರ್ತಿ ಹಾಗೂ ವಿಧ್ಯಾರ್ಥಿಗಳ ಮುಷ್ಕರಕ್ಕೆ ಮುಂದಾಗಿದ್ದಾರೆ. ಸ್ಥಳಾಂತರ ಆದೇಶ ಕೈಬಿಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ. ಸರ್ಕಾರದ ನಿರ್ಧಾರವನ್ನು ಖಂಡಿಸಿದ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿ ಸ್ಥಳಾಂತರ ಆದೇಶ ಹಿಂಪಡೆಯುವವರೆಗೆ ಮುಷ್ಕರ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.