Monday, January 20, 2025

ಕಡಲನಗರಿಯಲ್ಲಿ ಮೊದಲ ಬಾರಿಗೆ ದಾಖಲೆ ಸಂಖ್ಯೆಯ ಡಿಸ್ಚಾರ್ಜ್​​ 

ಮಂಗಳೂರು : ಕೊರೋನಾ ಮಹಾಮಾರಿಯ ಅಟ್ಟಹಾಸ ಶುರುವಾದ ಬಳಿಕ ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಭಾನುವಾರ 132 ಹೊಸ ಪ್ರಕರಣಗಳು ದಾಖಲಾಗಿದ್ದರೆ, 195 ಮಂದಿ ಕೊರೋನಾದಿಂದ ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ದಾರೆ. 

ಆದರೆ, ಸೋಂಕಿಗೆ  ಬಲಿಯಾಗುವವರ ಸಂಖ್ಯೆಯೂ ಅಧಿಕವಾಗಿದ್ದು, ಭಾನುವಾರ ಆರು ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಒಟ್ಟು 220 ಮಂದಿ ಕೊರೋನಾದಿಂದ ಮೃಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ 3,305 ಸಕ್ರಿಯ ಪ್ರಕರಣಗಳಿವೆ. 

-ಇರ್ಷಾದ್ ಕಿನ್ನಿಗೋಳಿ

RELATED ARTICLES

Related Articles

TRENDING ARTICLES