Tuesday, October 29, 2024

ಸಿದ್ದರಾಮಯ್ಯಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಯಡಿಯೂರಪ್ಪ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 73ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.

“ಹಿರಿಯ ರಾಜಕಾರಣಿಗಳು, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಆತ್ಮೀಯರೂ ಆಗಿರುವ ಶ್ರೀ ಸಿದ್ದರಾಮಯ್ಯನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ’’ ಅಂತ ಬಿಎಸ್​ವೈ ಟ್ವೀಟ್​ ಮಾಡಿದ್ದಾರೆ.

ಕೊರೋನಾ ಕಾರಣ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಈ ಬಾರಿ ಹುಟ್ಟುಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಸದ್ಯ ಕೊರೋನಾ ನೆಗಿಟಿವ್ ಬಂದಿದ್ದು, ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

RELATED ARTICLES

Related Articles

TRENDING ARTICLES