ಮುಂಬೈ : ಯುವ ಕ್ರಿಕೆಟಿಗ, ಮುಂಬೈ ರಣಜಿ ತಂಡಕ್ಕೆ ನೆಟ್ಸ್ನಲ್ಲಿ ಬೌಲಿಂಗ್ ಮಾಡುತ್ತಿದ್ದ ಕರಣ್ ತಿವಾರಿ (25) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪೂರ್ವ ಗೋರೆಗಾಂವ್ನ ಗೋಕುಲ ನಗರದಲ್ಲಿರುವ ತಮ್ಮ ನಿವಾಸದಲ್ಲಿ ತಿವಾರಿ ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಕತ್ಯೆಗೆ ಮಾಡಿಕೊಂಡಿದ್ದಾರೆ ಎಂದು ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಅಧಿಕಾರಿಯೊಬ್ಬರು ತಿಳಿಸಿದ್ದಾರೆಂದು ವರದಿಯಾಗಿದೆ.
ದಕ್ಷಿಣ ಆಫ್ರಿಕಾದ ವೇಗಿ ಡೇಲ್ ಸ್ಟೈಯ್ನ್ ಶೈಲಿಯಲ್ಲಿ ಕರಣ್ ಬೌಲಿಂಗ್ ಮಾಡುತ್ತಿದ್ದರು. ವಾಂಖೆಡೆ ಕ್ರೀಡಾಂಗಣದಲ್ಲಿ ಕಳೆದ ವರ್ಷ ಹಲವು ತಂಡಗಳಿಗೆ ನೆಟ್ ಬೌಲರ್ ಆಗಿ ಕರಣ್ ತಿವಾರಿ ಕಾರ್ಯನಿರ್ವಹಿಸಿದ್ದರು.
ಅವಕಾಶಗಳ ಕೊರತೆ, IPLನಲ್ಲಿ ಚಾನ್ಸ್ ಸಿಗದಿರುವುದು ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಕುರಾರ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದೆ.