ನವದೆಹಲಿ : ಮಾಜಿ ಕ್ರಿಕೆಟಿಗ ಮತ್ತು ಉತ್ತರ ಪ್ರದೇಶದ ಸಚಿವ ಚೇತನ್ ಚೌಹಾಣ್ (72) ಅವರು ಕೊವಿಡ್ನಿಂದ ನಿಧನರಾಗಿದ್ದಾರೆ.
ಕಳೆದ ಶುಕ್ರವಾರ ಕೊವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಲಖನೌನ ಸಂಜಯ್ ಗಾಂಧಿ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಉತ್ತರ ಪ್ರದೇಶ ಸರ್ಕಾರದಲ್ಲಿ ಸೈನಿಕ ಕಲ್ಯಾಣ, ಹೋಮ್ ಗಾರ್ಡ್ಸ್ ಮತ್ತು ನಾಗರಿಕ ಭದ್ರತೆ ಖಾತೆಗಳ ಸಚಿವರಾಗಿದ್ದರು. 1969 – 1978 ರ ನಡುವೆ 40 ಟೆಸ್ಟ್ ಮ್ಯಾಚ್ಗಳನ್ನು ಆಡಿದ್ದರು. 2084ರನ್ ಗಳಿಸಿದ್ದರು.