ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಹಾಸನ ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ ನೀಡಿ, ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ, ಗರಂ ಆಗಿದ್ದಾರೆ.
ಇಲಾಖೆಯ ಅಧಿಕಾರಿಗಳ ವಿರುದ್ಧ ಗರಂ ಆದ ಹೆಚ್ ಡಿ ರೇವಣ್ಣ, ಪ್ರತಿ ತಿಂಗಳು ನಾಲ್ಕು ಲಕ್ಷ ಕಲೆಕ್ಷನ್ ಮಾಡಿ ಯಾರಿಗೆ ಕೊಡ್ತಿದ್ದೀರಿ ಎಂದು ಪ್ರಶ್ನೆ ಮಾಡಿದರು. ಸೀನಿಯರಿಟಿ ಬಿಟ್ಟು ಯಾಕ್ರಿ ರಿಜಿಸ್ಟ್ರೇಷನ್ ಮಾಡ್ತಿದ್ದೀರಿ ಅಂತ ಆಕ್ರೋಶ ವ್ಯಕ್ತ ಪಡಿಸಿದರು.
ಜಿಲ್ಲೆಯಲ್ಲಿ ಎಲ್ಲ ಇಲಾಖೆಯಲ್ಲಿಯೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ಇದನ್ನೇ ಒಂದು ರೀತಿಯಲ್ಲಿ ದಂಧೆ ಮಾಡಿಕೊಂಡಿದ್ದಾರೆ. ಆರೂವರೆ ಪರ್ಸೆಂಟ್ನಿಂದ ಹತ್ತು ಪರ್ಸೆಂಟ್ ವರೆಗೂ ಕಮಿಷನ್ ನಡೆಯುತ್ತಿದ್ದು, ಕಮಿಷನ್ ಇಲ್ಲದೇ ಯಾವುದೇ ಕೆಲಸ ನಡೆಯುತ್ತಿಲ್ಲ ಎಂದು ಆರೋಪಿಸಿದರು.
ಇನ್ನು ಹಾಸನ ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸರ್ಕಾರದ ಅವಧಿಯಲ್ಲಿ ಬಿಡುಗಡೆಯಾಗಿದ್ದ ಎಲ್ಲಾ ಯೋಜನೆಗಳನ್ನು ತಡೆ ಹಿಡಿಯಲಾಗಿದೆ. ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಸರ್ಕಾರ ವಿರುದ್ಧ ಕಿಡಿಕಾರಿದರು.
-ಪ್ರತಾಪ್ ಹಿರೀಸಾವೆ