ಚಿಕ್ಕಬಳ್ಳಾಪುರ : ನೇಣು ಬಿಗಿದ ಸ್ಥಿತಿಯಲ್ಲಿ ನ್ಯಾಯಾಲಯದ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಪ್ರಶಾಂತ ನಗರದ ಮನೆಯಲ್ಲಿ ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದ ಗುಮಾಸ್ತನಾಗಿರುವ ನವೀನ್(30) ಮೃತ ದುರ್ದೈವಿಯಾಗಿದ್ದಾನೆ. ಶರ್ಟ್ ಹಾಗೂ ಪ್ಯಾಂಟ್ ನಿಂದ ಕುತ್ತಿಗೆಗೆ ಬಿಗಿದ ಸ್ಥಿತಿಯಲ್ಲಿ ನವೀನನ ಮೃತದೇಹ ಪತ್ತೆಯಾಗಿದೆ.
ಘಟನೆ ಸಂಬಂಧ ಬೆರಳಚ್ಚು ತಜ್ಞರು, ಶ್ವಾನದಳದೊಂದಿಗೆ ಚಿಕ್ಕಬಳ್ಳಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಬಳ್ಳಾಪುರ ನಗರ ಪೊಲೀಸರು ಚುರುಕಿನ ತನಿಖೆ ಕೈಗೊಂಡಿದ್ದಾರೆ..