ವಿಜಯಪುರ : ಬೆಳಗಾವಿ ಜಿಲ್ಲೆಯ ಪೀರನವಾಡಿಯ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧ ವ್ಯಕ್ತ ಪಡಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ ಹಾಗೂ ಬೆಳಗಾವಿ ಜಿಲ್ಲಾಡಳಿತದ ನಡೆಯನ್ನು ಖಂಡಿಸಿ ಜಯ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಇಂದು ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ರಾಯಣ್ಣನ ಜನ್ಮ ಭೂಮಿಯಲ್ಲಿ ರಾಯಣ್ಣನ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧ ವ್ಯಕ್ತ ಪಡಿಸುವ ಅಧಿಕಾರಿಗಳು ಸಂಬಾಜಿ, ಶಿವಾಜಿ, ತಾನಾಜಿ ಪ್ರತಿಮೆಗಳ ಪ್ರತಿಷ್ಟಾಪನೆ ಸಂದರ್ಭದಲ್ಲಿ ತುಟಿ ಬಿಚ್ಚಲಿಲ್ಲ, ಆದರೆ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆ ಸಂದರ್ಭದಲ್ಲಿ ಟ್ರಾಫಿಕ್ ಸಮಸ್ಯೆಯ ನೆಪ ಒಡ್ಡುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನೀಡುತ್ತಿರುವ ಸುಳ್ಳು ವರದಿಯನ್ನೇ ಜಿಲ್ಲಾಡಳಿತ ನಂಬುತ್ತಿದೆ, ಆದಷ್ಟು ಬೇಗ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ಸಹ ಅವಕಾಶ ಕಲ್ಪಿಸಬೇಕು, ಇರದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿ ಜಿಲ್ಲಾಧಿಕಾರಿಗಳ ಮೂಲಕ ಸಿಎಮ್ ಗೆ ಮನವಿಯನ್ನು ಸಲ್ಲಿಸಿದರು…